Home » ಉಗ್ರರನ್ನು ಬಿಡಬೇಡಿ : ಸರ್ವಪಕ್ಷ ಸಭೆ
 

ಉಗ್ರರನ್ನು ಬಿಡಬೇಡಿ : ಸರ್ವಪಕ್ಷ ಸಭೆ

by Kundapur Xpress
Spread the love

ನವದೆಹಲಿ : ಪಹಲ್ಲಾಂ ದಾಳಿ ಸಂಬಂಧ ಸರ್ವಪಕ್ಷ ಸಭೆ ನಡೆದಿದ್ದು, ಈ ವೇಳೆ ‘ಉಗ್ರರ ಎಲ್ಲಾ ಶಿಬಿರಗಳನ್ನು ನಾಶಪಡಿಸಿ ಎಂದು ಎಲ್ಲಾ ಪಕ್ಷದ ನಾಯಕರು ಒಕ್ಕೊರಲಿನಿಂದ ಆಗ್ರಹಿಸಿದ್ದಾರೆ ಹಾಗೂ ‘ಉಗ್ರವಾದದ ವಿರುದ್ದದ ಹೋರಾಟದಲ್ಲಿ ಎಲ್ಲರೂ ಸರ್ಕಾರದೊಂದಿಗೆ ನಿಲ್ಲುತ್ತೇವೆ’ ಎಂಬ ಭರವಸೆಯನ್ನೂ ನೀಡಿದ್ದಾರೆ.

ಉಗ್ರದಾಳಿಯಲ್ಲಿ ಅಸುನೀಗಿದವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಈ ಸಭೆ ಆರಂಭವಾಗಿದ್ದು ದಾಳಿಯ ಕುರಿತು ಸಂಪೂರ್ಣ ಚಿತ್ರಣವನ್ನು ಸರ್ಕಾರ ನೀಡಿತು. ಇದರ ಆಧಾರದಲ್ಲಿ ಎಲ್ಲಾ ಪಕ್ಷಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿವೆ.

ಸರ್ಕಾರದ ಪರವಾಗಿ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್. ಜೈಶಂಕರ್, ವಿತ್ತಸಚಿವೆ ನಿರ್ಮಲಾ ಸೀತಾರಾಮನ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಉಪಸ್ಥಿತರಿದ್ದರು. ಅಂತೆಯೆ, ಕಾಂಗ್ರೆಸ್, ಎನ್‌ಸಿಪಿ, ಎಂಐಎಂ, ಬಿಜೆಡಿ, ಆಪ್ ಡಿಎಂಕೆ ಸೇರಿದಂತೆ ಪ್ರಮುಖ ಪಕ್ಷಗಳ ನಾಯಕರು ಭಾಗವಹಿಸಿದ್ದರು.

 

Related Articles

error: Content is protected !!