147
ಶ್ರೀನಗರ : ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಭಾರೀ ಮಳೆ ಸುರಿಯುತ್ತಿರುವ ಪರಿಣಾಮ ಪಹಲ್ಗಾಮ್ ಮತ್ತು ಬಲ್ತಾಲ್ ಮಾರ್ಗಗಳ ಪವಿತ್ರ ಅಮರನಾಥ ಯಾತ್ರೆಯನ್ನು ಗುರುವಾರದ ತನಕ ರಾಜ್ಯ ಸರ್ಕಾರ ಸ್ಥಗಿತಗೊಳಿಸಿದೆ.
ಈ ಬಗ್ಗೆ ಜಮ್ಮು ಕಾಶ್ಮೀರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಯಾತ್ರಾ ಸ್ಥಳದಲ್ಲಿ ಭಾರಿ ಮಳೆ ಆಗುತ್ತಿದೆ. ಇದು ಯಾತ್ರಾರ್ಥಿಗಳ ಸಂಚಾರದ ಮೇಲೆ ಪರಿಣಾಮ ಬೀರಿದೆ. ಆದ್ದರಿಂದ ಜು.31ರಂದು ಭಗವತಿ ನಗರದ ಬಲ್ತಾಲ್ ಮತ್ತು ನುಟ್ಬಾಲ್ ಶಿಬಿರಗಳ ಕಡೆಗೆ ಯಾವುದೇ ಸಂಚಾರಕ್ಕೆ ಅನುಮತಿ ನೀಡುವುದಿಲ್ಲ ಎಂದಿದೆ.

