Home »  ಉಗ್ರರ ಬೇಟೆಗೆ ಸಂಪೂರ್ಣ ಬೆಂಬಲ : ಅಮೆರಿಕ
 

 ಉಗ್ರರ ಬೇಟೆಗೆ ಸಂಪೂರ್ಣ ಬೆಂಬಲ : ಅಮೆರಿಕ

by Kundapur Xpress
Spread the love

ವಾಷಿಂಗ್ಟನ್ : ಪಹಲ್ಗಾಮ್‌ ನಲ್ಲಿ ನರಮೇಧ ಮಾಡಿದ ಉಗ್ರರ ಬೇಟೆಯಾಡುವ ಭಾರತದ ಯತ್ನಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಅಮೆರಿಕ ಘೋಷಿಸಿದೆ.

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅಮೆರಿಕದ ಗುಪ್ತಚರ ಸಂಸ್ಥೆ ಮುಖ್ಯಸ್ಥೆ ತುಳಸಿ ಗಬ್ಬಾರ್ಡ್ ‘ಹಿಂದೂಗಳನ್ನು ಕೊಂದ ಭಯಾನಕ ಇಸ್ಲಾಮಿಕ್ ದಾಳಿ ವಿರುದ್ಧ ಅಮೆರಿಕ ಭಾರತದೊಂದಿಗೆ ಒಗ್ಗಟ್ಟಿನಿಂದ ನಿಲ್ಲಲಿದೆ. ಈ ದಾಳಿಗೆ ಕಾರಣರಾದವರನ್ನು ನೀವು ಬೇಟೆಯಾಡುವಾಗ ನಾವು ನಿಮ್ಮೊಂದಿಗಿರುತ್ತೇವೆ ಎಂದಿದ್ದಾರೆ. ಜೊತೆಗೆ ದಾಳಿಯಲ್ಲಿ ಮಡಿದವರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಈಗಾಗಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಫ್ರಾನ್ಸ್ ಅಧ್ಯಕ್ಷ ಎಮ್ಯಾನುವೆಲ್ ಮ್ಯಾಕ್ರನ್, ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಸೇರಿ ಹಲವು ಜಾಗತಿಕ ನಾಯಕರು ದಾಳಿಗೆ ಕಾರಣರಾದವರನ್ನು ಶಿಕ್ಷಿಸುವ ಪ್ರಧಾನಿ ಮೋದಿಯವರ ಪ್ರಯತ್ನಗಳನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

 

Related Articles

error: Content is protected !!