ನವದೆಹಲಿ : ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸೆ.21ರಿಂದ 23 ರವರೆಗೆ ಮೂರು ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಮಂಗಳವಾರ ಮಾಹಿತಿ ನೀಡಿರುವ ವಿದೇಶಾಂಗ ಸಚಿವಾಲಯ, ‘ಸೆ.21ರಂದು ಡೆಲ್ಟಾರೆಯ ವಿಲ್ಡಿಂಗ್ಟನ್ನಲ್ಲಿ ವಾರ್ಷಿಕ ಕ್ವಾಡ್ ಸಮ್ಮೇಳನ ನಡೆಯಲಿದೆ. ಅದರಲ್ಲಿ ಭಾರತದ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಸೆ.22ರಂದು ನ್ಯೂಯಾರ್ಕ್ನಲ್ಲಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ ಜೊತೆಗೆ ಜಾಗತಿಕ ಕಂಪನಿಗಳ ಸಿಇಒಗಳ ಜತೆ ಮಾತುಕತೆ ನಡೆಸಲಿದ್ದಾರೆ. ಸೆ.23ರಂದು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ‘ಸಮ್ಮಿಟ್ ಆಫ್ ಪ್ಯೂಚರ್’ ಸಮ್ಮೇಳನ ಉದ್ದೇಶಿಸಿ ಮೋದಿ ಮಾತನಾಡಲಿದ್ದಾರೆ’