Home » ಅಮೇರಿಕ ನೆಲೆಗಳ ಮೇಲೆ ಇರಾನ್‌ ಬಾಂಬ್
 

ಅಮೇರಿಕ ನೆಲೆಗಳ ಮೇಲೆ ಇರಾನ್‌ ಬಾಂಬ್

by Kundapur Xpress
Spread the love

ಟೆಹ್ರಾನ್ : ತನ್ನ ಮೂರು ಪರಮಾಣು ನೆಲೆಗಳ ಮೇಲೆ ಅಮೆರಿಕ ನಡೆಸಿದ ದಾಳಿಯಿಂದ ಆಕ್ರೋಶಗೊಂಡಿದ್ದ ಇರಾನ್, ಸೋಮವಾರ ವಿಶ್ವದ ಅತ್ಯಂತ ಶಕ್ತಿಶಾಲಿ ದೇಶದ ಮೇಲೆ ಪ್ರತೀಕಾರದ ದಾಳಿ ಆರಂಭಿಸಿದೆ. ಮಧ್ಯ ಪ್ರಾಚ್ಯದಲ್ಲಿರುವ ಅಮೆರಿಕದ ಸೇನಾನೆಲೆಗಳನ್ನು ಗುರಿಯಾಗಿಸಿ ಇರಾನ್ ಸೇನೆ ಸೋಮವಾರ ರಾತ್ರಿ ಭೀಕರ ಕ್ಷಿಪಣಿ ದಾಳಿ ನಡೆಸಿದೆ. ಸಿರಿಯಾ, ಕತಾರ್‌ನ ದೋಹಾ ಮತ್ತು ಇರಾಕ್‌ನಲ್ಲಿರುವ ಅಮೆರಿಕದ ಸೇನಾ ನೆಲೆಗಳನ್ನು ಗುರಿಯಾಗಿಸಿ ಇರಾನ್ 10ಕ್ಕೂ ಹೆಚ್ಚು ಕ್ಷಿಪಣಿಗಳನ್ನು ಉಡಾಯಿಸಿದೆ.

ಈ ಹಿನ್ನೆಲೆಯಲ್ಲಿ ಈ ಪ್ರದೇಶದಲ್ಲಿನ ಅಮೆರಿಕ ಸೇನಾ ನೆಲೆಗಳಲ್ಲಿನ ವಾಯುರಕ್ಷಣಾ ವ್ಯವಸ್ಥೆಯನ್ನು ಸಕ್ರಿಯಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಇರಾನ್ ನಡೆಸಿದ ಕ್ಷಿಪಣಿ ದಾಳಿಯಲ್ಲಿ ಅಮೆರಿಕದ ಸೇನಾನೆಲೆಗಳಿಗೆ ಹಾನಿಯಾಗಿರುವ ಕುರಿತು ಯಾವುದೇ ಮಾಹಿತಿ ಹೊರಬಿದ್ದಿಲ್ಲ.

ತಕ್ಷಣಕ್ಕೆ ಇನ್ನೊಂದೆಡೆ ದಾಳಿಯ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಟ್ರಂಪ್, ಸಂಪುಟದ ಹಿರಿಯ ಸಹೋದ್ಯೋಗಿಗಳು ಮತ್ತು ಸೇನಾ ಮುಖ್ಯಸ್ಥರ ಜತೆ ತುರ್ತು ಸಭೆನಡೆಸಿಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. 

 

Related Articles

error: Content is protected !!