179
ವಾಷಿಂಗ್ಟನ್ : ಡೆನ್ವರ್ ವಿಮಾನ ನಿಲ್ದಾಣದಲ್ಲಿ, ಅಮೆರಿಕನ್ ಏರ್‌ಲೈನ್ಸ್ ವಿಮಾನ 3023 ನಲ್ಲಿ ಭಾನುವಾರ ಟೇಕ್-ಆಫ್ ವೇಳೆ ಬೆಂಕಿ ಕಾಣಿಸಿಕೊಂಡು ಭಯದ ಸನ್ನಿವೇಶಕ್ಕೆ ಕಾರಣವಾಯಿತು.
ಮಿಯಾಮಿಗೆ ತೆರಳುತ್ತಿದ್ದ ಬೋಯಿಂಗ್ 737 ಮ್ಯಾಕ್ಸ್ 8 ವಿಮಾನದ ಲ್ಯಾಂಡಿಂಗ್ ಗೇರ್‌ನಿಂದ ಬೆಂಕಿ ಮತ್ತು ಹೊಗೆ ಹೊರ ಹೊಮ್ಮಿತು. ಅದೃಷ್ಟವಶಾತ್, ಎಲ್ಲಾ 173 ಪ್ರಯಾಣಿಕರು ಮತ್ತು ಆರು ಸಿಬ್ಬಂದಿ ತುರ್ತು ಸೈಟ್‌ಗಳನ್ನು ಬಳಸಿ ಸುರಕ್ಷಿತವಾಗಿ ಪಾರಾಗಿದ್ದಾರೆ. ಗಾಯಗೊಂಡ ಒಬ್ಬ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಂಕಿಯನ್ನು ತ್ವರಿತವಾಗಿ ನಂದಿಸಲಾಯಿತು. ಅಮೆರಿಕನ್ ಏರ್‌ಲೈನ್ಸ್ ಪ್ರಯಾಣಿಕರ ಕ್ಷಮೆಯಾಚಿಸಿ, ತಕ್ಷಣ ಬದಲಿ ವಿಮಾನದ ವ್ಯವಸ್ಥೆ ಮಾಡಿದೆ ಸಿಬ್ಬಂದಿಯ ತ್ವರಿತ ಪ್ರತಿಕ್ರಿಯೆಯನ್ನು ಅಧಿಕಾರಿಗಳು ಶ್ಲಾಘಿಸಿದ್ದಾರೆ.

