132
ನ್ಯೂಯಾರ್ಕ್ : ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿರುವ ಸ್ವಾಮಿ ನಾರಾಯಣ ಹಿಂದೂ ದೇಗುಲದ ಗೋಡೆಗಳ ಮೇಲೆ ಭಾರತ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕೀಳು ಬರಹಗಳನ್ನು ಗೀಚಿ ವಿರೂಪಗೊಳಿಸಲಾಗಿದೆ. ಲಾಸ್ ಏಂಜಲೀಸ್ ಬಳಿಯ ಸ್ಯಾನ್ ಬರ್ನಾರ್ಡಿನೊದ ಚಿನೋ ಹಿಲ್ಸ್‌ನಲ್ಲಿರುವ ಮಂದಿರದಲ್ಲಿ ಈ ದುಷ್ಕೃತ್ಯ ನಡೆಸಲಾಗಿದೆ
ಈ ಕೃತ್ಯ ಯಾರು ಎಸಗಿದ್ದಾರೆ ಎಂಬ ಮಾಹಿತಿ ಇಲ್ಲ ಆದರೆ ಅಮೆರಿಕದಲ್ಲಿ ಖಲಿಸ್ತಾನಿಗಳು ಜನಮತಗಣನೆ ಮಾಡುವ ದಿನ ಸಮೀಪಿಸುತ್ತಿರುವ ಹೊತ್ತಿನಲ್ಲೇ ಈ ಘಟನೆ ನಡೆದಿರುವ ಕಾರಣ ಅವರ ಮೇಲೆ ಶಂಕೆ ಇದೆ. ಇದರ ಬೆನ್ನಲ್ಲೇ ಭಾರತ ಸರ್ಕಾರ ಈ ಕೃತ್ಯವನ್ನು ಖಂಡಿಸಿದ್ದು ದೇವಸ್ಥಾನಕ್ಕೆ ಬಿಗಿ ಭದ್ರತೆಗೆ ಆಗ್ರಹಿಸಿದೆ

