ಹೊಸದಿಲ್ಲಿ : ಭಯೋತ್ಪಾದನೆಯ ವಿರುದ್ಧ ಹೋರಾಡಲು ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ. ಇದರ ನಿಗ್ರಹಕ್ಕಾಗಿ ಶೀಘ್ರದಲ್ಲೇ ಹೊಸ ರಾಷ್ಟ್ರೀಯ ಭಯೋತ್ಪಾದನಾ ವಿರೋಧಿ ನೀತಿಯನ್ನು ಜಾರಿಗೆ ತರುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.
ರಾಜ್ಯ ಪೊಲೀಸ್ ಪಡೆಗಳ ಮುಖ್ಯಸ್ಥರು ಮತ್ತು ರಾಜ್ಯಗಳು ಮತ್ತು ಕೇಂದ್ರದ ಇತರ ಉನ್ನತ ಭದ್ರತಾ ಅಧಿಕಾರಿಗಳು ಭಾಗವಹಿಸಿದ್ದ ಭಯೋತ್ಪಾದನಾ ವಿರೋಧಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಅವರು, ಇದರಲ್ಲಿ ನೀವೆಲ್ಲರೂ ಪ್ರಮುಖ ಪಾತ್ರ ವಹಿಸುತ್ತೀರಿ ಎಂದರು.
ಹೊಸ ನೀತಿಯು ಭಯೋತ್ಪಾದನೆಯನ್ನು ಎದುರಿಸಲು ರಾಜ್ಯಗಳು ಮತ್ತು ಕೇಂದ್ರ ಸಂಸ್ಥೆಗಳಿಗೆ ನಿಕಟ ಸಮನ್ವಯದಿಂದ ಕೆಲಸ ಮಾಡಲು ಸಹಾಯ ಮಾಡುತ್ತದೆ. ಮಾದರಿ ಎಟಿಎಸ್ ಮತ್ತು ಎಸ್ ಟಿ ಎಫ್ ಬಗ್ಗೆ ಮಾತನಾಡಿದ ಅವರು, ಸ್ಟ್ಯಾಂಡರ್ಡ್ ಅಪರೇಟಿಂಗ್ ಕಾರ್ಯ ವಿಧಾನಗಳನ್ನು (ಎಸ್ ಒಪಿ) ರಾಜ್ಯಗಳೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಮತ್ತು ಅವರು ಆಯಾ ಅಗತ್ಯಗಳಿಗೆ ಅನುಗುಣವಾಗಿ ಬದಲಾಯಿಸಬಹುದು ಎಂದು ಹೇಳಿದರು.