188
ರಾಂಬನ್ : ಜಮ್ಮು-ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಭಾನುವಾರ ಸೇನಾ ವಾಹನವೊಂದು 700 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿಗಳು ಸಾವಿಗೀಡಾಗಿದ್ದಾರೆ. ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಜಮ್ಮುವಿನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಬೆಂಗಾವಲು ಪಡೆಯ ಭಾಗವಾಗಿದ್ದ ಸೇನಾ ಟ್ರಕ್ ಬ್ಯಾಟರಿ ಚಶ್ಚಾ ಬಳಿ ಬೆಳಿಗ್ಗೆ 11.30ರ ಸುಮಾರಿಗೆ ಕಂದಕಕ್ಕೆ ಉರುಳಿ ಬಿದ್ದಿದೆ. ವಾಹನದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸೈನಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು ಗುರುತಿಸಲಾಗಿದೆ

