Home » 14 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
 

14 ಸಾವಿರ ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ವಿಜಯ್‌ ಮಲ್ಯ ಕೇಸ್

by Kundapur Xpress
Spread the love

ನವದೆಹಲಿ : ಭಾರತದ ಬ್ಯಾಂಕುಗಳಲ್ಲಿ ಸಾಲ ಮಾಡಿಕೊಂಡು ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರ 14,131 ಕೋಟಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡು ಸಾರ್ವಜನಿಕ ಮತ್ತು ಖಾಸಗಿವಲಯದ ಬ್ಯಾಂಕ್ಗಳಿಗೆ ಹಸ್ತಾಂತರಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಸಂಸತ್ತಿಗೆ ಮಾಹಿತಿ ನೀಡಿದ ಅವರು ಮಲ್ಯ ಹಾಗೂ ಇತರ ದೇಶಭ್ರಷ್ಟ ಉದ್ಯಮಿಗಳಾದ ಮೆಹುಲ್ ಚೋಕ್ಷೆ ಮತ್ತು ನೀರವ್ ಮೋದಿಯಂತಹ ವಾಂಟೆಡ್ ವ್ಯಕ್ತಿಗಳ ಸಾಲವನ್ನು ಮರುಪಾವತಿಸಲು ಜಾರಿ ನಿರ್ದೇಶನಾಲಯ  22.280 ಕೋಟಿ ಮೌಲ್ಯದ ಆಸ್ತಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿದೆ ಹಾಗೂ ಆರ್ಥಿಕ ಅಪರಾಧಿಗಳ ವಿರುದ್ಧದ ಹೋರಾಟ ಮುಂದುವರಿಸಿದೆ’ ಎಂದು ಹೇಳಿದರು. ನಾವು ಯಾರನ್ನೂ ಬಿಟ್ಟಿಲ್ಲ. ಅವರು ದೇಶ ಬಿಟ್ಟು ಓಡಿ ಹೋದರೂ ನಾವು ಅವರ ಬೆನ್ನಟ್ಟಿದ್ದೇವೆ. ಬ್ಯಾಂಕ್‌ಗೆ ಬರಬೇಕಾದ ಹಣವನ್ನು ವಸೂಲಿ ಮಾಡಿದ್ದೇವೆ ಎಂದರು.

 

Related Articles

error: Content is protected !!