ಫ್ಲೋರಿಡಾ : 6 ಮುಂದೂಡಿಕೆಗಳ ನಂತರ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರ ಬಾಹ್ಯಾಕಾಶಯಾನ ಬುಧವಾರ ಆರಂಭವಾಗಿದೆ. ‘ಆಕ್ಸಿಯೋಂ-4′ ಮಿಷನ್ ನ ಭಾಗವಾಗಿ ಫ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಇವ ರನ್ನು ಹೊತ್ತ ಸ್ಪೇಸ್ ಎಕ್ಸ್ ನ ಫಾಲ್ಕನ್ – 9 -ರಾಕೆಟ್, ಭಾರತೀಯ ಕಾಲಮಾನ ಮಧ್ಯಾಹ್ನ 12.01ಕ್ಕೆ ನಭಕ್ಕೆ ಚಿಮ್ಮಿದೆ.
ಶುಕ್ಲಾ 41 ವರ್ಷಗಳ ಬಳಿಕ ಅಂತರಿಕ್ಷಯಾನ ಕೈಗೊಳ್ಳುತ್ತಿರು ವ ಮೊದಲ ಭಾರತೀಯ ಮತ್ತು ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರಕ್ಕೆ (ಐಎಸ್‌ಎಸ್) ತೆರಳುತ್ತಿರುವ ಮೊದಲ ಭಾರತೀಯ ఎంబ ದಾಖಲೆಯನ್ನು ನಿರ್ಮಿಸಿದ್ದಾರೆ. 1984ರಲ್ಲಿ ರಾಕೇಶ್ ಶರ್ಮಾ ರಷ್ಯಾದ ಸೂಯೆಜ್ ನೌಕೆಯಲ್ಲಿ ಅಂತರಿಕ್ಷಕ್ಕೆ ಹೋಗಿದ್ದರು.
ಇಂದು ಸಂಜೆ 4.30ಕ್ಕೆ ಐಎಸ್‌ಎಸ್‌ಗೆ :
ಶುಕ್ಲಾ ಸೇರಿ ನಾಲ್ವರ ಯಾನ ಬುಧವಾರ ಮಧ್ಯಾಹ್ನ 12.01ಕ್ಕೆ ಆರಂಭಆಯಿತು. ಗಗನಯಾತ್ರಿಗಳು 28 ಗಂಟೆಗಳ ಪ್ರಯಾಣದ ಬಳಿಕ ಗುರುವಾರ ಭಾರತೀಯ ಕಾಲಮಾನ ಸಂಜೆ ಸುಮಾ ರು 4.30ಕ್ಕೆ ಬಾಹ್ಯಾಕಾಶ ಕೇಂದ್ರಕ್ಕೆ ಡಾಕ್ (ಜೋಡಣೆ) ಆಗುವ ನಿರೀಕ್ಷೆ ಇದೆ. ಶುಕ್ಲಾ ಜತೆ ಅಮೆರಿಕದ ಪೆಗ್ಗಿ ವಿಟ್ಸನ್, ಪೋಲೆಂಡ್‌ನ ಸವೋಝ್ ಉಝ್ ನಾಸ್ಕಿ, ಹಂಗರಿಯ ಟಿರ್ಬ ಕಪು ಈ ಯೋಜನೆಯ ಭಾಗವಾಗಿದ್ದಾರೆ.
ಇಸ್ರೋ ಪರ ಶುಕ್ಲಾ 7 ಪ್ರಯೋಗ :
ಇವರೆಲ್ಲ 14 ದಿನಗಳ ಕಾಲ ಐಎಸ್‌ಎಸ್‌ನಲ್ಲಿ ಇರಲಿದ್ದು, 60ಕ್ಕೂ ಅಧಿಕ ಪ್ರಯೋ ಗಗಳನ್ನು ಕೈಗೊಳ್ಳಲಿದ್ದಾರೆ. ಈ ಪೈಕಿ ಶುಭಾಂಶು ಶುಕ್ಲಾ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಪರ 7 ಅಧ್ಯಯನ ನಡೆಸಲಿದ್ದಾರೆ. ಇವು ಭವಿಷ್ಯದಲ್ಲಿ ಭಾರತದ ಅಂತರಿಕ್ಷ ಯಾನಕ್ಕೆ ನೆರವಾಗಲಿವೆ. ಮುಂದೆ ಭಾರತ ಅಂತರಿಕ್ಷ ಯಾನ ಕೈಗೊಂಡರೆ ಶುಕ್ಲಾ ಅವರೇ ನೇತೃತ್ವ ವಹಿಸಿ ಮುಖ್ಯ ಗಗನಯಾನಿ ಆಗಲಿದ್ದಾರೆ.

