122
ಡೆಹರಾಡೂನ್ : ಉತ್ತರಾಖಂಡದ ಪ್ರಸಿದ್ಧ ಯಾತ್ರಾಸ್ಥಳ ಬದರಿನಾಥದಿಂದ 3 ಕಿ.ಮೀ. ದೂರದಲ್ಲಿರುವ ಚಮೋಲಿ ಜಿಲ್ಲೆಯ ಮಾಣಾ ಎಂಬಲ್ಲಿ ಶುಕ್ರವಾರ ಭಾರೀ ಹಿಮಕುಸಿತ ಸಂಭವಿಸಿದೆ ಹಿಮ ತೆರವು ಕೆಲಸಕ್ಕೆ ನಿಯೋಜಿಸಲಾಗಿದ್ದ 57 ಕಾರ್ಮಿ ಕರು ಅದರಡಿ ಸಿಲುಕಿದ್ದು, ಅವರಲ್ಲಿ ಈಗಾ ಗಲೇ 32 ಮಂದಿಯನ್ನು ರಕ್ಷಿಸಲಾಗಿದೆ. ಇನ್ನೂ 25 ಕಾರ್ಮಿಕರ ರಕ್ಷಣೆಗೆ ಯತ್ನ ನಡೆದಿದೆ. ಈವರೆಗೆ ಯಾವುದೇ ಸಾವು ವರದಿಯಾಗಿಲ್ಲ
ಭಾರತ ಹಾಗೂ ಟಿಬೆಟ್ ಗಡಿಯ ಬಳಿ 3,200 ಮೀ. ಎತ್ತರದಲ್ಲಿರುವ ಮಾಣಾ ಹಾಗೂ ಬದರಿನಾಥ ನಡುವಿದ್ದ ಗಡಿ ರಸ್ತೆ ಗಳ ಸಂಸ್ಥೆಯ (ಬಿಆರ್‌ಒ) ಕ್ಯಾಂಪ್‌ಗಳ ಮೇಲೆ ಹಿಮ ಕುಸಿದಿದ್ದು, ಅದು ಹೂತು ಹೋಗಿದೆ. ಕೂಡಲೇ ರಕ್ಷಣಾ ಕಾರ್ಯ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಂದೀಪ್ ತಿವಾರಿ ತಿಳಿಸಿದ್ದಾರೆ

