ನವದೆಹಲಿ : ಬಾಂಗ್ಲಾ ದೇಶದಲ್ಲಿ ಹಿಂದೂಗಳೂ ಸೇರಿದಂತೆ ಅಲ್ಪಸಂಖ್ಯಾತರ ರಕ್ಷಣೆಗೆ ಎಲ್ಲಾ ರೀತಿಯ ಕ್ರಮ ಕೈಗೊಳ್ಳು ವುದಾಗಿ ದೇಶದ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮೃದ್ ಯೂನಸ್ ಭಾರತಕ್ಕೆ ಭರವಸೆ ನೀಡಿದ್ದಾರೆ.
ಚುಕ್ಕಾಣಿ ಹಿಡಿದ ಬಳಿಕ ಮೊದಲ ಬಾರಿಗೆ ಶುಕ್ರವಾರ ಭಾರತದ ಪ್ರಧಾನಿ ನರೇಂದ್ರ ಮೋದಿಗೆ ದೂರ ವಾಣಿ ಕರೆ ಮಾಡಿದ್ದ ಯೂನಸ್ ಈ ಭರವಸೆ ನೀಡಿದ್ದಾರೆ.ಅವರ ಜೊತೆಗಿನ ಮಾತುಕತೆಯನ್ನು ಎಕ್ಸ್ ನಲ್ಲಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ‘ಮುಹಮ್ಮದ್ ಯೂನಸ್ ಅವರೊಂದಿಗೆ ಟೆಲಿಫೋನ್ ಸಂಭಾಷಣೆ ನಡೆಸಲಾಯಿತು. ಬಾಂಗ್ಲಾದಲ್ಲಾಗುತ್ತಿರುವ ವರ್ತಮಾನಗಳ ಕುರಿತು ಚರ್ಚಿಸಲಾಯಿತು.
ಈ ವೇಳೆ ಪ್ರಜಾಪ್ರಭುತ್ವ, ಸ್ಥಿರ, ಶಾಂತಿಯುತ ಹಾಗೂ ಅಭಿವೃದ್ಧಿಶೀಲ ಬಾಂಗ್ಲಾ ದೇಶಕ್ಕೆ ಭಾರತದ ಬೆಂಬಲ ಸದಾ ಇರುತ್ತದೆ ಎಂದು ಪುನರುಚ್ಚರಿಸಲಾಯಿತು. ಅಲ್ಲಿನ ಹಿಂದೂಗಳು ಸೇರಿದಂತೆ ಅಲ್ಪಸಂಖ್ಯಾತರನ್ನು ರಕ್ಷಿಸುವುದಾಗಿ ಯೂನಸ್ ಭರವಸೆ ನೀಡಿದ್ದಾರೆ’ ಎಂದು ಹೇಳಿದ್ದಾರೆ.
ಯೂನಸ್ಅಧಿಕಾರ ವಹಿಸಿಕೊಂಡಾಗ ಪ್ರಧಾನಿ ನರೇಂದ್ರ ಮೋದಿ ಅವರು ಶುಭಾಶಯ ಕೋರಿ, ಹಿಂದೂಗಳು ಮತ್ತು ಅಲ್ಪಸಂಖ್ಯಾತರ ಮೇಲಿನ ದಾಳಿಯನ್ನು ಖಂಡಿಸಿ, ಭದ್ರತೆ ಒದಗಿಸುವಂತೆ ಕೋರಿದ್ದರು