ಢಾಕಾ : ದೇಶದ್ರೋಹ ಪ್ರಕರಣದಲ್ಲಿ ಬಂಧನವಾಗಿರುವ ಇಲ್ಲಿನ ಇಸ್ಕಾನ್ ಸದಸ್ಯ ಚಿನ್ಮಯ್ ಕೃಷ್ಣ ದಾಸ್ ಸೇರಿದಂತೆ 18 ಜನರ ಬ್ಯಾಂಕ್ ಖಾತೆಗಳನ್ನು 30 ದಿನ ಸ್ಥಗಿತಗೊಳಿಸುವಂತೆ ಬಾಂಗ್ಲಾ ಸರ್ಕಾರ ಆದೇಶಿಸಿದೆ.
ಈ ಬಗ್ಗೆ ಬಾಂಗ್ಲಾದೇಶ ಬ್ಯಾಂಕ್ ಹಣ ಕಾಸು ಗುಪ್ತಚರ ಘಟಕ ಗುರುವಾರ ವಿವಿಧ ಬ್ಯಾಂಕ್ ಗಳು ಮತ್ತು ಹಣಕಾಸು ಸಂಸ್ಥೆ ಗಳಿಗೆ ನಿರ್ದೇಶನಗಳನ್ನು ಕಳುಹಿಸಿದ್ದು, ಈ ಖಾತೆಗಳಲ್ಲಿನ ವಹಿವಾಟುಗಳನ್ನು 1 ತಿಂಗಳು ಸ್ಥಗಿತ ಗೊಳಿಸುವಂತೆ ಸೂಚಿಸ ಲಾಗಿದೆ. ಜತೆಗೆ ಖಾತೆಗಳಲ್ಲಿ ನಡೆದ ವಹಿವಾಟಿನ ವರದಿಯನ್ನು 3 ದಿನಗಳಲ್ಲಿ ನೀಡುವಂತೆಯೂ ಸೂಚಿಸಲಾಗಿದೆ.
ಅಲ್ಪಸಂಖ್ಯಾತರ ರಕ್ಷಿಸಿ: ಭಾರತ ಒತ್ತಾಯ
ನವದೆಹಲಿ :ಬಾಂಗ್ಲಾದಲ್ಲಿ ಮಧ್ಯಂತರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಲ್ಪಸಂಖ್ಯಾತರ ಮೇಲೆ ದಾಳಿಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಮಧ್ಯಂತರ ಸರ್ಕಾರವು ಬಾಂಗ್ಲಾ ದೇಶದಲ್ಲಿ ಎಲ್ಲ ಅಲ್ಪಸಂಖ್ಯಾತರನ್ನು ರಕ್ಷಿಸಬೇಕು ಎಂದು ಭಾರತ ಒತ್ತಾಯಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಮಾತನಾಡಿ, ಅಲ್ಪಸಂಖ್ಯಾತರ ಮೇಲಿನ ದಾಳಿ ನಿಲ್ಲಿಸಿ, ಅವರನ್ನು ರಕ್ಷಿಸಿ ಎಂದು ಒತ್ತಾಯಿಸಿದ್ದಾರೆ.