ನವದೆಹಲಿ : ನೆರೆರಾಷ್ಟ್ರ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಹಾಗೂ ಹಿಂದೂಗಳ ಮೇಲಿನ ದಾಳಿಗಳು ಹೆಚ್ಚುತ್ತಿರುವ ನಡುವೆಯೇ ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ತ್ರಿ ಅವರು ಸೋಮವಾರ ಢಾಕಾಗೆ 1 ದಿನ ಪ್ರವಾಸ ಕೈಗೊಳ್ಳಲಿದ್ದಾರೆ.
ಇದು ಹಸೀನಾ ನಿರ್ಗಮನದ ಬಳಿಕ ಭಾರತದ ರಾಜತಾಂತ್ರಿಕರು ಬಾಂಗ್ಲಾಗೆ ಕೈಗೊಳ್ಳುತ್ತಿರುವ ಮೊದಲ ಭೇಟಿಯಾಗಿದ್ದು, ಮಹತ್ವ ಪಡೆದುಕೊಂಡಿದೆ. ಭೇಟಿ ವೇಳೆ ಅವರು ಅಲ್ಲಿನ ವಿದೇಶಾಂಗ ಕಾರ್ಯದರ್ಶಿ ಮೊಹಮ್ಮದ್ ಜಶಿಮ್ ಉದ್ದಿನ್ ಹಾಗೂ ವಿದೇಶಾಂಗ ಸಚಿವ ಮೊಹಮ್ಮದ್ ತೌಶಿದ್ ಹೌಸೇನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಮಾತುಕತೆ ನಡೆಸಲಿದ್ದಾರೆ. ಈ ವೇಳೆ ಮಿಸ್ತ್ರಿ ಅವರು ಅಲ್ಲಿನ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮೊಹಮ್ಮದ್ ಯೂನಸ್ರನ್ನೂ ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.