79
ಚೆನ್ನೈ : ತಮಿಳುನಾಡು ಕಮಲ ಪಾಳಯದಲ್ಲಿ ಮಹತ್ವದ ಬದಲಾವಣೆ ನಡೆದಿದ್ದು, ನಟಿ ಖುಷ್ಟು ಸುಂದರ್‌ರನ್ನು ರಾಜ್ಯ ಬಿಜೆಪಿ ಉಪಾಧ್ಯಕ್ಷೆಯನ್ನಾಗಿ ನೇಮಕ ಮಾಡಲಾಗಿದೆ.
ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಖುಷ್ಟು ಅವರ ಆಯ್ಕೆಯನ್ನು ಅನುಮೋದಿಸಿದ್ದಾರೆ’ ಎಂದಿದ್ದಾರೆ.
2020ರಲ್ಲಿ ಖುಷ್ಟು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಈ ನಡುವೆ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈಗೆ ಕೇಂದ್ರ ಬಿಜೆಪಿಯಲ್ಲಿ ಮಹತ್ವದ ಹುದ್ದೆ ಸಿಗುವ ಸಾಧ್ಯತೆ ಇದೆ ಎಂದು ಗೊತ್ತಾಗಿದೆ.

