Home » ನಾಳೆ ನಿರ್ಮಲಾ ಸೀತಾರಾಮನ್‌ ಸತತ 8ನೇ ಬಜೆಟ್
 

ನಾಳೆ ನಿರ್ಮಲಾ ಸೀತಾರಾಮನ್‌ ಸತತ 8ನೇ ಬಜೆಟ್

by Kundapur Xpress
Spread the love

ನವದೆಹಲಿ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ.1ರಂದು ಪ್ರಧಾನಿ ನರೇಂದ್ರ ಮೋದಿ ಸರ್ಕಾರದ 3ನೇ ಅವಧಿಯ ಎರಡನೇ ಬಜೆಟ್ ಮಂಡಿಸಲಿದ್ದಾರೆ. ಈ ಮೂಲಕ ಸೀತಾರಾಮನ್ ಅವರು ಸತತ 8ನೇ ಭಾರಿ ಬಜೆಟ್‌ ಮಂಡಿಸಿದ ದಾಖಲೆ ನಿರ್ಮಿಸಲಿದ್ದಾರೆ.

ಈ ಬಾರಿಯ ಬಜೆಟ್‌ನಲ್ಲಿ ದುರ್ಬಗೊಂಡಿರುವ ಆರ್ಥಿಕ ಬೆಳವಣಿಗೆಗೆ ಬಲ ತುಂಬುವ ಹಾಗೂ ಬೆಲೆ ಏರಿಕೆ ಮತ್ತು ಸ್ಥಿರ ಆದಾಯದಂತಹ ಸಮಸ್ಯೆಗಳಿಂದ ಬಳಲುತ್ತಿರುವ ಮಧ್ಯಮ ವರ್ಗದವರಿಗೆ ಅನುಕೂಲವಾಗುವಂತಹ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ.

2019ರಲ್ಲಿ ಮೋದಿ ಸರ್ಕಾರದ 2ನೇ ಅವಧಿಯಲ್ಲಿ ಪೂರ್ಣಾವಧಿ ವಿತ್ತ ಸಚಿವೆಯಾಗಿ ನೇಮಕಗೊಂಡ ನಿರ್ಮಲಾ ಅವರು ಒಟ್ಟು 7 ಪೂರ್ಣಾವಧಿ ಹಾಗೂ 2024ರ ಫೆಬ್ರವರಿಯಲ್ಲಿ 1 ಮಧ್ಯಂತರ ಬಜೆಟ್ ಮಂಡಿಸಿದ್ದರು. ಇನ್ನು ಕೇವಲ 3 ಬಜೆಟ್ ಮಂಡಿಸಿದರೆ ಒಟ್ಟು 11 ಬಜೆಟ್ ಮಂಡಿಸಿದ ಸಾರ್ವಕಾಲಿಕ ದಾಖಲೆ ಸೃಷ್ಟಿಸಲಿದ್ದಾರೆ.

ಈವರೆಗೆ ವಿವಿಧ ಸರ್ಕಾರಗಳ ಅವಧಿಯಲ್ಲಿ 10 ಬಾರಿ ಬಜೆಟ್ ಮಂಡಿಸಿದ ಖ್ಯಾತಿಗೆ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರು ಪಾತ್ರರಾಗಿದ್ದಾರೆ. ಉಳಿದಂತೆ ಎತ್ತ ಸಚಿವರಾಗಿದ್ದ ಪಿ. ಚಿದಂಬರಂ 9 ಬಾರಿ ಹಾಗೂ ಪ್ರಣಬ್ ಮುಖರ್ಜಿ 8 ಬಾರಿ ಬಜೆಟ್ ಮಂಡಿಸಿದ್ದಾರೆ.

 

Related Articles

error: Content is protected !!