61
ನವದೆಹಲಿ : ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಬೆನ್ನಲ್ಲೇ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರ ಭದ್ರತೆಯನ್ನು ಕೇಂದ್ರ ಸರ್ಕಾರ ಮತ್ತಷ್ಟು ಹೆಚ್ಚಿಸಿದೆ. ಪ್ರಸಕ್ತ ಝಡ್ ಮಾದರಿ ಭದ್ರತೆ ಹೊಂದಿರುವ ಜೈಶಂಕರ್‌ಗೆ ಬುಲೆಟ್ ಪ್ರೊಫ್ ವಾಹನ ಸೌಲಭ್ಯ ಒದಗಿಸಲಾಗಿದೆ.
ಪಹಲ್ಗಾಮ್ ದಾಳಿ ಬಳಿಕ ಜಾಗತಿಕ ಸಮುದಾಯದ ಮುಂದೆ ಪಾಕಿಸ್ತಾನದ ಬಣ್ಣ ಬಯಲು ಮಾಡುವ ಕೆಲಸವನ್ನು ಯಶಸ್ವಿಯಾಗಿ ನಿರ್ವಹಿಸುತ್ತಿರುವ ಜೈಶಂಕರ್ ಅವರ ಭದ್ರತೆ ಕುರಿತು ಗುಪ್ತಚರ ಸಂಸ್ಥೆಗಳು ಇತ್ತೀಚೆಗೆ ಪರಿಶೀಲನೆ ನಡೆಸಿದ್ದವು. ಈ ವೇಳೆ ಅವರ ಭದ್ರತೆ ಹೆಚ್ಚಳದ ಅವಶ್ಯಕತೆ ಮನಗಂಡು ಅವರಿಗೆ ಎರಡು ಗುಂಡಿನ ದಾಳಿ ನಿರೋಧಕ ವಾಹನ ವ್ಯವಸ್ಥೆಗೆ ಶಿಫಾರಸು ಮಾಡಲಾಗಿತ್ತು.

