Home » ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಶಪಥ
 

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಶಪಥ

by Kundapur Xpress
Spread the love

ನವದೆಹಲಿ : ಭಾರತೀಯ ಚುನಾವಣಾ ಆಯೋಗದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ (ಸಿಇಸಿ) ಜ್ಞಾನೇಶ್ ಕುಮಾರ್ ಬುಧವಾರ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ‘ರಾಷ್ಟ್ರನಿರ್ಮಾಣದ ಮೊದಲ ಹೆಜ್ಜೆ ಮತದಾನ. ಆದ್ದರಿಂದ 18 ವರ್ಷ ಪೂರೈಸಿದ ಪ್ರತಿಯೊಬ್ಬ ನಾಗರಿಕನು ಮತದಾರನಾಗಬೇಕು ಮತ್ತು ಮತ ಚಲಾಯಿಸಬೇಕು’ ಎಂದರು. ಇದೇ ವೇಳೆ ಹರಿಯಾಣ ಕೇಡರ್‌ನ ಮಾಜಿ ಐಎಎಸ್ ಅಧಿಕಾರಿಯಾಗಿರುವ ವಿವೇಕ್ ಜೋಶಿ ಅವರು ಚುನಾವಣಾ ಆಯಕ್ತರಾಗಿ ಅಧಿಕಾರ ಸ್ವೀಕರಿಸಿದರು. ಜ್ಞಾನೇಶ್ ನೇಮಕ ನಿಯಮಾನುಸಾರ ಆಗಿಲ್ಲ ಎಂದು ಇತ್ತೀಚೆಗೆ ಕಾಂಗ್ರೆಸ್ ಆಕ್ಷೇಪಿಸಿತ್ತು.

 

Related Articles

error: Content is protected !!