ಹೊಸದಿಲ್ಲಿ: ಜುಲೈ 22 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜುಲೈ 23 ರಂದು ಬಹು ನಿರೀಕ್ಷಿತ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ. ಜುಲೈ 22 ಮತ್ತು ಆಗಸ್ಟ್ 12ರ ನಡುವೆ ಸಂಸತ್ತಿನ ಉಭಯ ಸದನಗಳನ್ನು ಕರೆಯುವ ಪ್ರಸ್ತಾಪಕ್ಕೆ ರಾಷ್ಟ್ರಪತಿ ದೌಪದಿ ಮುರ್ಮು ಶನಿವಾರ ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಮಾಹಿತಿ ನೀಡಿದ್ದಾರೆ. ದಾಖಲೆಯ ಮೂರನೇ ಅವಧಿಗೆ ಮರು ಆಯ್ಕೆಯಾದ ನಂತರ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಮಂಡಿಸುತ್ತಿರುವ ಮೊದಲ ಬಜೆಟ್ ಇದಾಗಿದೆ. ಮುಂಬರುವ ಬಜೆಟ್ ಹಲವಾರು ಐತಿಹಾಸಿಕ ಹೆಜ್ಜೆಗಳಿಂದ ಗುರುತಿಸಲ್ಪಡುತ್ತದೆ ಮತ್ತು ಪ್ರಮುಖ ಸಾಮಾಜಿಕ ಮತ್ತು ಆರ್ಥಿಕ ನಿರ್ಧಾರಗಳನ್ನು ಹೊಂದಿರುತ್ತದೆ ಎಂದು ರಾಷ್ಟ್ರಪತಿಗಳು ತಮ್ಮ ಭಾಷಣದಲ್ಲಿ ಉಲ್ಲೇಖಿಸಿದ್ದರಿಂದ ಬಜೆಟ್ ಬಗೆಗಿನ ಕುತೂಹಲ ಹೆಚ್ಚಿದೆ.
ಸೀತಾರಾಮನ್ ಅವರು ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ್ದರು. ಮಧ್ಯಂತರ ಬಜೆಟ್‌ನಲ್ಲಿ ವಿತ್ತ ಸಚಿವರು, ಆರ್ಥಿಕ ವರ್ಷ 2025ರ ಹಣಕಾಸಿನ ಕೊರತೆಯ ಗುರಿಯನ್ನು ಜಿಡಿಪಿಯ 5.1% ಕ್ಕೆ ಇಳಿಸಿದ್ದರು. ಹಳೆಯ ಮತ್ತು ಹೊಸ ಆಡಳಿತದಲ್ಲಿ ತೆರಿಗೆ ಸ್ಟ್ರಾಬ್‌ಗಳಲ್ಲಿ ಯಾವುದೇ ಬದಲಾವಣೆ ‘ಘೋಷಿಸಿರಲಿಲ್ಲ.