Home » ಚಿನಾಬ್ ಜಲವಿದ್ಯುತ್ : 44 ವರ್ಷ ಬಳಿಕ ಕೇಂದ್ರ ಟೆಂಡ‌ರ್
 

ಚಿನಾಬ್ ಜಲವಿದ್ಯುತ್ : 44 ವರ್ಷ ಬಳಿಕ ಕೇಂದ್ರ ಟೆಂಡ‌ರ್

ಪಾಕಿಸ್ತಾನಕ್ಕೆ ಮತ್ತೊಂದು ಜಲಾಘಾತ

by Kundapur Xpress
Spread the love

ಶ್ರೀನಗರ : ಶತ್ರು ದೇಶ ಪಾಕಿಸ್ತಾನಕ್ಕೆ ಮತ್ತೊಂದು ಜಲಾಘಾತ ನೀಡುವತ್ತ ಭಾರತ ಹೆಜ್ಜೆ ಇಡುತ್ತಿದೆ. ಭಾರತದಿಂದ ಪಾಕ್‌ಗೆ ಹರಿಯುವ ಚಿನಾಬ್ ನದಿಗೆ ಅಡ್ಡಲಾಗಿ ದೇಶದ ಅತಿ ದೊಡ್ಡ ಜಲವಿದ್ಯುತ್ ಯೋಜನೆ ನಿರ್ಮಾಣಕ್ಕೆ 44 ವರ್ಷದ ಬಳಿಕ ಕೇಂದ್ರ ಸರ್ಕಾರ ಟೆಂಡ‌ರ್ ಕರೆದಿದೆ.

ಪಹಲ್ಗಾಮ್ ದಾಳಿ ಬಳಿಕ ಸಿಂಧೂ ಜಲ ಒಪ್ಪಂದವನ್ನು ಭಾರತ ಸ್ಥಗಿತಗೊಳಿಸಿತ್ತು. ಇದೀಗ ಪಾಕ್ ಜತೆ ಮಾಹಿತಿ ಹಂಚಿಕೊಳ್ಳದೆ, ಸಾವಲ್‌ಕೋಟ್‌ನಲ್ಲಿ 1856 ಮೆಗಾವ್ಯಾಟ್ ಜಲವಿದ್ಯುತ್ ಯೋಜನೆಯನ್ನು ಆರಂಭಿಸಲಾಗಿದೆ. ಇದಕ್ಕಾಗಿ ರಾಷ್ಟ್ರೀಯ ಜಲವಿದ್ಯುತ್ ನಿಗಮ ಬುಧವಾರ ಟೆಂಡ‌ರ್ ಕರೆದಿದ್ದು, ಬಿಡ್ ಸಲ್ಲಿಸಲು ಸೆ.10 ಕೊನೆ ದಿನವಾಗಿದೆ.

ಎನ್‌ಎಚ್‌ಪಿಸಿ ಮತ್ತು ಜಮ್ಮು ಕಾಶ್ಮೀರ ವಿದ್ಯುತ್ ಅಭಿವೃದ್ದಿ ನಿಗಮ ಒಟ್ಟಾಗಿ ಈ ಯೋಜನೆ ಸಾಕಾರಕ್ಕೆ ಶ್ರಮಿಸುತ್ತಿದ್ದು, ಇದಕ್ಕೆ 22,704 ಕೋಟಿ ರು. ವ್ಯಯವಾಗುವ ಅಂದಾಜಿದೆ. ಈ ಯೋಜನೆಯಿಂದ ಭಾರತ ಇಂಧನ ಸ್ವಾವಲಂಬನೆ ಸಾಧಿಸುವುದಲ್ಲದೆ, ಪಶ್ಚಿಮದ ನದಿಗಳ ಮೇಲೆ ಸಂಪೂರ್ಣ ನಿಯಂತ್ರಣ ಸಾಧಿಸಬಹುದು.

 

Related Articles

error: Content is protected !!