ನವದೆಹಲಿ : ನರೇಂದ್ರ ಮೋದಿ 3.0 ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು, ಎತ್ತ ಸಚಿವ ನಿರ್ಮಲಾ ಸೀತಾರಾಮನ್ ತಮ್ಮ ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಬಜೆಟ್‌ನ್ನು ಪ್ರಧಾನಿ ಹೊಗಳಿದ್ದು ‘ಈ ಬಜೆಟ್ ಉತ್ತಮ ಬೆಳವಣಿಗೆ ಮತ್ತು ಉಜ್ವಲ ಭವಿಷ್ಯವನ್ನು ಸೂಚಿಸುತ್ತದೆ’ ಎಂದು ಬಣ್ಣಿಸಿದ್ದಾರೆ.
‘ಭಾರತವನ್ನು ವಿಶ್ವದ ಮೂರನೇ ದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಈ ಬಜೆಟ್ ವೇಗವರ್ಧಕವಾಗಿ ಕಾರ್ಯ ನಿರ್ವಹಿಸುತ್ತದೆ. ದೇಶದ ಅಭಿವೃದ್ಧಿಗೆ ಭದ್ರ ಬುನಾದಿಯನ್ನು ಹಾಕುತ್ತದೆ’ ಎಂದು ಶ್ಲಾಘಿಸಿದ್ದಾರೆ.
ಅಲ್ಲದೇ, ಬಜೆಟ್‌ನಲ್ಲಿ ಘೋಷಣೆಯಾದ ತಮ್ಮ ಸರ್ಕಾರದ ಹಲವು ಮಹತ್ವಕಾಂಕ್ಷಿ ಯೋಜನೆಗಳ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.ಯುವ ಸಮುದಾಯ, ಹಿಂದುಳಿದ ಸಮುದಾಯ, ಮಹಿಳೆಯರು ಮತ್ತು ಮಧ್ಯಮವರ್ಗ, ಉತ್ಪಾದನಾ ಮತ್ತು ಮೂಲಭೂತ ಸೌಕರ್ಯಗಳನ್ನು ಗುರಿಯಾಗಿಸಿಕೊಂಡಿರುವ ಈ ಬಜೆಟ್ ಕೋಟಿಗಟ್ಟಲೇ ಉದ್ಯೋಗ ಸೃಷ್ಟಿಸುತ್ತದೆ ಎನ್ನುವ ವಿಶ್ವಾಸವನ್ನು ಮೋದಿ ವ್ಯಕ್ತಪಡಿಸಿದರು.
ಸಮಾಜದ ಎಲ್ಲ ಸ್ತರದ ಉನ್ನತಿ ಮತ್ತು ಸಬಲೀ ಕರಣದ ಗುರಿಯನ್ನು ಈ ಬಜೆಟ್ ಹೊಂದಿದೆ ಎಂದಿರುವ ಪ್ರಧಾನಿ, ‘ಈ ಬಜೆಟ್‌ನಲ್ಲಿನ ಉದ್ಯೋಗ ಸಂಬಂಧಿತ ಪ್ರೋತ್ಸಾಹ ಯೋಜನೆಯು ಕೋಟಿಗಟ್ಟಲೇ ಉದ್ಯೋಗವನ್ನು ಸೃಷ್ಟಿಸುತ್ತದೆ. ಉದ್ಯೋ ಗಕ್ಕೆ ಸೇರುವ ಯುವ ಸಮುದಾಯದ ಮೊದಲ ತಿಂಗಳ ಸಂಬಳವನ್ನು ಸರ್ಕಾರವೇ ಭರಿಸುತ್ತದೆ. ಉನ್ನತ ಶಿಕ್ಷಣಕ್ಕೆ ಸರ್ಕಾ ರ ದಿಂದ ನೆರವು ಮತ್ತು 1 ಕೋಟಿ ಯುವಕರಿಗೆ ಇಂಟರ್ನ್ ಶಿಪ್ ಸೌಲಭ್ಯ ಕಲ್ಪಿಸಲಾಗುತ್ತದೆ’ ಎಂದರು. ಅಲ್ಲದೇ ಈ ಬಜೆಟ್‌ನಲ್ಲಿ ಶಿಕ್ಷಣ ಮತ್ತು ಕೌಶ್ಯಲಾಭಿವೃದ್ಧಿಗೆ ವಿಶೇಷ ಆದ್ಯತೆಗ ಳನ್ನು ನೀಡಲಾಗಿದೆ ಎಂದು ಪ್ರಸ್ತಾಪಿಸಿದರು.