ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ವಿವಿಧ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಮತ್ತು ಇತರ ಪ್ರಮುಖ ಅಭಿವೃದ್ಧಿ ಯೋಜನೆಗಳ ಕುರಿತು ಚರ್ಚಿಸಿದರು. ಇದೇ ವೇಳೆ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ವಿವಿಧ ಯೋಜನೆಗಳ ಪ್ರಸ್ತಾವನೆಗಳಿಗೆ ಶೀಘ್ರ ಅನುಮೋದನೆ ನೀಡುವಂತೆ ಮನವಿ ಮಾಡಿದರು
ರಾಜ್ಯದಲ್ಲಿ ಬೆಳಗಾವಿ-ಹುನಗುಂದ- ರಾಯಚೂರು ಬೆಂಗಳೂರು ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿ, ಸೂರತ್ ಚೆನ್ನೈ ಎಕ್ಸ್ಪ್ರೆಸ್ ಹೆದ್ದಾರಿ, ಬೆಂಗಳೂರು ನಗರದ ಉಪನಗರ ವರ್ತುಲ ರಸ್ತೆ ಗ್ರೀನ್ಫೀಲ್ಡ್ ಕಾರಿಡಾರ್ಗಳ ಅಭಿವೃದ್ಧಿಗೆ ಅನುಮೋದನೆ ನೀಡಿರುವುದಕ್ಕೆ ಇದೇ ವೇಳೆ ಕೃತಜ್ಞತೆ ಸಲ್ಲಿಸಿದ ಅವರು, ಹಲವು ಯೋಜನೆಗಳ ಕುರಿತು ವಿಚಾರ ವಿನಿಮಯ ನಡೆಸಿದರು