ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಆಯ್ಕೆಯಾಗಿದ್ದಾರೆ ಡಿಸೆಂಬರ್ 5 ರಂದು ನಡೆಯಲಿರುವ ಹೊಸ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ದಕ್ಷಿಣ ಮುಂಬೈನ ಅಜಾದ್ ಮೈದಾನದಲ್ಲಿ ಸಂಜೆ 5.00 ಗಂಟೆಗೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ ಬವಾಂಕುಲೆ ತಿಳಿಸಿದ್ದಾರೆ. ಮುಖ್ಯಮಂತ್ರಿ ಯಾರೆಂಬುದರ ಬಗ್ಗೆ ಇನ್ನೂ ಯಾವುದೇ ಘೋಷಣೆಯಾಗದಿದ್ದರೂ, ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಮತ್ತು ಉಪ ಮುಖ್ಯಮಂತ್ರಿಯಾಗಿದ್ದ ದೇವೇಂದ್ರ ಫಡ್ನವೀಸ್ ಅವರು ಈ ಹುದ್ದೆಗೆ ಮುಂಚೂಣಿಯಲ್ಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಪುಣೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎನ್ಸಿಪಿ ಮುಖ್ಯಸ್ಥ ಅಜಿತ್ ಪವಾರ್, ಮುಖ್ಯಮಂತ್ರಿ ಬಿಜೆಪಿಯವರೇ ಆಗಿದ್ದರೆ, ಶಿವಸೇನೆ ಅಭ್ಯರ್ಥಿ ಉಪ ಮುಖ್ಯಮಂತ್ರಿಗಳಾಗಿರುತ್ತಾರೆ ಎಂದು ಹೇಳಿದ್ದಾರೆ. ಈ ನಡುವೆ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಡಿ. 2 ರಂದು ಸಭೆ ನಡೆಯಲಿದೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. ಫಡ್ನವೀಸ್ ಅವರಿಗೆ ಈ ಬಾರಿ ಸಿಎಂ ಸ್ಥಾನ ಸಿಗುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.