ಹೊಸದಿಲ್ಲಿ: ರಾಷ್ಟ್ರ ರಾಜಧಾನಿ ದಿಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಸತತ 10 ವರ್ಷ ಆಡಳಿತ ನಡೆಸಿದ ಆಮ್ ಆದ್ಮಿ ಪಕ್ಷ ಭ್ರಷ್ಟಾಚಾರ ಮತ್ತು ಆಡಳಿತ ವಿರೋಧಿ ಅಲೆಯಲ್ಲಿ ಕೊಚ್ಚಿ ಹೋಗಿದೆ. ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಸತತ ಮೂರನೇ ಬಾರಿಗೂ ಸೊನ್ನೆ ಸುತ್ತಿದೆ.
ದಿಲ್ಲಿ ವಿಧಾನಸಭೆಯ 70 ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನಗಳಲ್ಲಿ ಗೆದ್ದು ಬೀಗಿದ್ದು, ಎಎಪಿ 22 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಆ ಮೂಲಕ ದಿಲ್ಲಿ ಮಾಜಿ ಸಿಎಂ ಅರವಿಂದ ಕೇಜ್ರವಾಲ್‌ಗೆ ತೀವ್ರ ಮುಖಭಂಗವಾಗಿದೆ. ಇನ್ನು ಕಾಂಗ್ರೆಸ್ ಖಾತೆ ತೆರೆಯುವಲ್ಲಿ ವಿಫಲವಾಗಿದೆ. ಇದರೊಂದಿಗೆ ಸತತ 27 ವರ್ಷಗಳ ಬಳಿಕ ಬಿಜೆಪಿಗೆ ದಿಲ್ಲಿ ಆಡಳಿತದ ಚುಕ್ಕಾಣಿ ಲಭಿಸಿದೆ. ಆ ಮೂಲಕ ಇದೇ ಮೊದಲ ಬಾರಿಗೆ ಬಿಜೆಪಿಗೆ ಕೇಂದ್ರ ಮತ್ತು ದಿಲ್ಲಿಯಲ್ಲಿ ಒಟ್ಟಿಗೆ ಅಧಿಕಾರ ನಡೆಸುವ ಅವಕಾಶ ಸಿಕ್ಕಿದೆ.
2015 ಹಾಗೂ 2020ರ ಚುನಾವಣೆಗಳಲ್ಲಿ ಭಾರೀ ಬಹುಮತದಿಂದ ಗೆದ್ದು ಆಡಳಿತ ನಡೆಸಿದ್ದ ಆಮ್ ಆಕ್ಟ್ ಪಕ್ಷವು ಮತ್ತೊಮ್ಮೆ ಅಧಿಕಾರಕ್ಕೇರುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ

