ಚಂಡೀಗಢ : ಕನಿಷ್ಟ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ, ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇ ರಿಕೆಗೆ ಆಗ್ರಹಿಸಿ ಪಂಜಾಬ್ ಮತ್ತು ಹರ್ಯಾಣ ರೈತರು ನಡೆಸುತ್ತಿರುವ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಗೋಚರಿಸಿದೆ.
ಶನಿವಾರ ದಿನದ ಮಟ್ಟಿಗೆ ಸ್ಥಗಿತಗೊಂಡಿದ್ದ ಹೋರಾಟವನ್ನು ರೈತರು ಭಾನುವಾರ ಪುನಾರಂಭ ಮಾಡಿದರಾದರೂ ರೈತರ ದೆಹಲಿ ಚಲೋ ಪಾದಯಾತ್ರೆಯನ್ನು ಹರ್ಯಾಣದ ಶಂಭು ಗಡಿಯಲ್ಲೇ ಪೊಲೀಸರು ತಡೆದಿದ್ದಾರೆ.
ಈ ಸಂದರ್ಭದಲ್ಲಿ ಎಚ್ಚರಿಕೆಯ ಹೊರತಾಗಿಯೂ ಬ್ಯಾರಿಕೇಡ್ ದಾಟಿ ಶಂಭುಗಡಿ ದಾಟಲು ಮುಂದಾದವರ ಮೇಲೆ ಹರ್ಯಾಣ ಪೊಲೀಸರು ಅಶ್ರು ವಾಯು ಮತ್ತು ಜಲಫಿರಂಗಿ ಪ್ರಯೋಗಿಸಿದ್ದು 10 ರೈತರು ಗಾಯಗೊಂಡಿದ್ದಾರೆ.