121
ನವದೆಹಲಿ ; ರಾಷ್ಟ್ರ ರಾಜಧಾನಿ ನವದೆಹಲಿಯ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದ ಘಟನೆಗೆ ರೈಲಿನ ಹೆಸರಿನ ಕುರಿತು ಪ್ರಯಾಣಿಕರಲ್ಲಿ ಉಂಟಾದ ಗೊಂದಲವೇ ಕಾರಣ ಎಂಬ ವಿಷಯ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜೊತೆಗೆ ಘಟನೆಯಲ್ಲಿ ಗಾಯಗೊಂಡಿದ್ದ ಮೂವರು ವ್ಯಕ್ತಿಗಳು ಭಾನುವಾರ ಸಾವನ್ನಪ್ಪುವುದರೊಂದಿಗೆ ದುರ್ಘಟನೆಗೆ ಬಲಿಯಾದವರ ಸಂಖ್ಯೆ 18ಕ್ಕೆ ಏರಿದೆ.
ಈ ನಡುವೆ ಕಾಲ್ತುಳಿತ ದುರಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ಘಟನೆಯನ್ನು ಸಾಂಸ್ಥಿಕ ಹತ್ಯೆ ಎಂದು ಕಿಡಿಕಾರಿದ್ದು, ರೈಲ್ವೆ ಸಚಿವ ಅಶ್ವಿನಿ ವೈಷ್ಣನ್ ರಾಜೀನಾಮೆಗೆ ಒತ್ತಾಯಿಸಿವೆ. ಆದರೆ ರೈಲ್ವೆ ಇಲಾಖೆ ಮಾತ್ರ ಪ್ರಯಾಣಿಕರ ನಡುವೆ ಆದ ಗೊಂದಲದಿಂದ ಘಟನೆ ಸಂಭವಿಸಿದೆ. ರೈಲುಗಳ ಪ್ಲಾಟ್‌ಫಾರಂ ಸಂಖ್ಯೆಯನ್ನು ಕೊನೇ ಕ್ಷಣದಲ್ಲಿ ಬದಲಿಸಿದ್ದು ಕಾಲ್ತುಳಿತಕ್ಕೆ ಕಾರಣವಾಯಿತು ಎಂಬ ಆರೋಪ ಸುಳ್ಳು ಎಂದಿದೆ. ಆದಾಗ್ಯೂ ಇಬ್ಬರು ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆಗೆ ರೈಲ್ವೆ ಆದೇಶಿಸಿದೆ

