198
ಇಸ್ಲಾಮಾಬಾದ್ : ಪಹಲ್ಗಾಮ್ ದಾಳಿ ಕುರಿತು ವಿಶ್ವಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿರುವ ಮಧ್ಯೆಯೇ, ಪಾಕ್‌ನ ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ ದಾಳಿಯಲ್ಲಿ ತಮ್ಮದೇ ದೇಶದ ಕೈವಾಡವಿರುವುದಾಗಿ ಆರೋಪಿಸಿದ್ದಾರೆ.
ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, ಪಹಲ್ಗಾಮ್ ದಾಳಿಯಲ್ಲಿ ಪಾಕಿಸ್ತಾನದ ಕೈವಾಡ ಇಲ್ಲವೆಂದಾದರೆ, ಪ್ರಧಾನಿ ಶೆಹಬಾಜ್ ಷರೀಪ್ ಘಟನೆಯನ್ನು ಏಕೆ ಖಂಡಿಸಿಲ್ಲ ? ಏಕೆ ನಿಮ್ಮ ಭದ್ರತಾ ಪಡೆಗಳು ಒಮ್ಮೆಲೆ ಎಚ್ಚರಗೊಂಡವು ? ಏಕೆಂದರೆ ನಿಮಗೆ ಸತ್ಯ ತಿಳಿದಿದೆ. ನೀವು ಭಯೋತ್ಪಾದಕರಿಗೆ ಆಶ್ರಯ ನೀಡುತ್ತಿದ್ದೀರಿ ಮತ್ತು ಪೋಷಿಸುತ್ತಿದ್ದೀರಿ. ನಿಮಗೆ ನಾಚಿಕೆಯಾಗಬೇಕು ಎಂದು ಪಾಕ್ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ದಾನಿಶ್ ಕನೇರಿಯಾ 2000-2010ರ ಅವಧಿಯಲ್ಲಿ ಪಾಕ್ ತಂಡವನ್ನು ಪ್ರತಿನಿಧಿಸಿದ ಹಿಂದೂ ಕ್ರಿಕೆಟಿಗ.

