Home » ದಿಶಾ ಸಾವು : ಆದಿತ್ಯ ಠಾಕ್ರೆ ವಿರುದ್ಧ ತಂದೆ ದೂರು
 

ದಿಶಾ ಸಾವು : ಆದಿತ್ಯ ಠಾಕ್ರೆ ವಿರುದ್ಧ ತಂದೆ ದೂರು

by Kundapur Xpress
Spread the love

ಮುಂಬೈ : 2020ರಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದ ಸುಶಾಂತ್ ಸಿಂಗ್ ಮಾಜಿ ಮ್ಯಾನೇಜರ್  ದಿಶಾ ಸಾಲಿಯಾನ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಉದ್ಧವ್ ಠಾಕ್ರೆ ಪುತ್ರ ಶಾಸಕ ಆದಿತ್ಯ ಠಾಕ್ರೆ ಹಾಗೂ ಮತ್ತಿತರರ ವಿರುದ್ಧ ಎಫ್‌ಐಆ‌ರ್ ದಾಖಲಿಸುವಂತೆ ದಿಶಾ ಸಾಲಿಯಾನ್ ತಂದೆ ಸತೀಶ ಸಾಲಿಯಾನ್ ಜಂಟಿ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಇತ್ತೀಚೆ ಗಷ್ಟೇ ಸತೀಶ್  ನನ್ನ ಮಗಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ. ಕೆಲವು ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲು ರಾಜಕೀಯವಾಗಿ ಯತ್ನ ನಡೆಯುತ್ತಿದೆ. ಆದಿತ್ಯ ಠಾಕ್ರೆ ವಿರುದ್ಧ ಎಫ್‌ಐಆ‌ರ್ ದಾಖಲಿಸಬೇಕು: ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಹೈಕೋರ್ಟ್ ಮೊರೆ ಹೋಗಿದ್ದರು. ಈ ಅರ್ಜಿ ಏಪ್ರಿಲ್ ಮೊದಲ ವಾರದಲ್ಲಿ ವಿಚಾರಣೆಗೆ ಬರುವ ಸಾಧ್ಯತೆಯಿದೆ. ಈ ಬೆನ್ನಲ್ಲೇ ಪೊಲೀಸರಿಗೆ ಅವರು ಲಿಖಿತ ದೂರು ನೀಡಿದ್ದಾರೆ.

 

Related Articles

error: Content is protected !!