ನವದೆಹಲಿ : ಕೋಲ್ಕತಾದ ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ಕಿರಿಯ ವೈದ್ಯೆಯ ಮೇಲಿನ ಅತ್ಯಾಚಾರ, ಹತ್ಯೆ ಹಾಗೂ ನಂತರ ಆಸ್ಪತ್ರೆ ಮೇಲೆ ನಡೆದ ದಾಳಿ ಖಂಡಿಸಿ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಕರೆ ಕೊಟ್ಟಿದ್ದರಿಂದ ದೇಶವ್ಯಾಪಿ ಮುಷ್ಕರ ಯಶಸ್ವಿಯಾಗಿದೆ. 10 ಲಕ್ಷಕ್ಕೂ ಹೆಚ್ಚು ವೈದ್ಯಕೀಯ ಸಿಬ್ಬಂದಿ ವಿವಿಧ ಸೇವೆ ಸ್ಥಗಿತಗೊಳಿಸುವ ಮೂಲಕ ರಕ್ಷಣೆಗಾಗಿ ಮತ್ತೊಮ್ಮೆ ಸರ್ಕಾರಕ್ಕೆ ಮೊರೆ ಇಟ್ಟಿದ್ದಾರೆ.
ಮುಷ್ಕರದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ವೈದ್ಯಕೀಯ ಸಿಬ್ಬಂದಿ, ಲ್ಯಾಬ್ ಸಿಬ್ಬಂದಿಯೂ ಭಾಗಿಯಾದ ಕಾರಣ ದೇಶ ವ್ಯಾಪಿ ವೈದ್ಯಕೀಯ ಸೇವೆ ಭಾರೀ ವ್ಯತ್ಯಯವಾಯಿತು. ಮುಷ್ಕರ ನಡೆದ 24 ಗಂಟೆಗಳ ಅವಧಿಯಲ್ಲಿ ಎಲ್ಲಾ ರೀತಿಯ ತುರ್ತು ಸೇವೆಗಳು ಲಭ್ಯವಿತ್ತಾದರೂ, ಹೊರರೋಗಿ ವಿಭಾಗಗಳು (ಒಪಿಡಿ) ಕೆಲಸ ಮಾಡಲಿಲ್ಲ
ಕುಂದಾಪುರ ವೈದ್ಯಕೀಯ ಸಂಘ ಕುಂದಾಪುರ ಶಾಖೆಯ ವತಿಯಿಂದ ವೈದ್ಯರು ನರ್ಸ್ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಮುಷ್ಕರ ನಡೆಸಿದರು