Home » ಮೋದಿ ಸೋಲಿಸಲು ಬೈಡನ್‌ ಸರ್ಕಾರ ಯತ್ನಿಸಿತ್ತು
 

ಮೋದಿ ಸೋಲಿಸಲು ಬೈಡನ್‌ ಸರ್ಕಾರ ಯತ್ನಿಸಿತ್ತು

ಟ್ರಂಪ್‌ ಆರೋಪ

by Kundapur Xpress
Spread the love

ವಾಷಿಂಗ್ಟನ್ : ಭಾರತದ ಚುನಾವಣೆಗಳ ಕುರಿತು ಸ್ಪೋಟಕ ಹೇಳಿಕೆ ನೀಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತ ದಲ್ಲಿ ಮತದಾನ ಪ್ರಕ್ರಿಯೆಗೆ ನೆರವಾಗಲು ಅಮೆರಿಕದ ಹಿಂದಿನ ಸರ್ಕಾರಗಳು ‘ಯುಎಸ್ ಏಡ್’ ಯೋಜನೆ ಅಡಿ ನೀಡುತ್ತಿದ್ದ 180 ಕೋಟಿ ರು. ನಿಧಿಯನ್ನು ಮತ್ತೊಮ್ಮೆ ಪ್ರಶ್ನಿಸಿದ್ದಾರೆ. ಅಲ್ಲದೆ, ಈ ಹಿಂದಿನ ಜೋ ಬೈಡೆನ್ ಆಡಳಿತವು ಭಾರತದಲ್ಲಿ ‘ಬೇರೊಬ್ಬರನ್ನು ಆಯ್ಕೆ ಮಾಡುವ’ ಯತ್ನ ನಡೆಸುತ್ತಿತ್ತು ಎಂಬ ಶಂಕೆ ಇದೆ’ ಎಂದಿದ್ದಾರೆ. ಈ ಮೂಲಕ ನರೇಂದ್ರ ಮೋದಿ ಸೋಲಿಸಲು ಬೈಡೆನ್ ಯತ್ನಿಸಿದ್ದರು ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಅಲ್ಲದೆ, ‘ಭಾರತದ ಚುನಾವಣೆಗಳಲ್ಲಿ ಬೈಡನ್ ಆಡಳಿತವು ಹಸ್ತಕ್ಷೇಪ ಮಾಡುತ್ತಿತ್ತು ಎಂಬ ಸ್ಪಷ್ಟ ಸುಳಿವು ನೀಡಿರುವ ಟ್ರಂಪ್, ನನ್ನ ಸರ್ಕಾರ ಈ ವಿಷಯವನ್ನು ಕೈಗೆತ್ತಿಕೊಂಡು ಮೋದಿ ಸರ್ಕಾರದೊಂದಿಗೆ ಮಾತುಕತೆ ನಡೆಸಲಿದೆ ಎಂದು ಹೇಳಿದ್ದಾರೆ.

ಇತ್ತೀಚೆಗೆ ಟ್ರಂಪ್ ಆಡಳಿತವು ಭಾರತಕ್ಕೆ ನೀಡುತ್ತಿದ್ದ ಈ 180 ಕೋಟಿ ರು. ಚುನಾವಣಾ ನೆರವು ನಿಲ್ಲಿಸುವುದಾಗಿ ಘೋಷಿಸಿತ್ತು

 

Related Articles

error: Content is protected !!