ಬೆಳಗಾವಿ : ಭಾರತ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ ಆರೋಗ್ಯ ಯೋಜನೆ ದೇಶದ ಜನರ ಆರೋಗ್ಯ ಕಾಪಾಡುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಎಂದು ರಾಷ್ಟ್ರಪತಿ ಬ್ರೌಪದಿ ಮುರ್ಮು ಹೇಳಿದರು.
ನಗರದಲ್ಲಿ ಕೆಎಲ್‌ಇ ಸಂಸ್ಥೆ ವತಿಯಿಂದ ನೂತನವಾಗಿ ನಿರ್ಮಿಸಲಾದ ಸಮಗ್ರ ಚಿಕಿತ್ಸೆ ಅತ್ಯಾಧುನಿಕ ತಂತ್ರಜ್ಞಾನ ಒಳಗೊಂಡಿರುವ ಡಾ. ಸಂಪತಕುಮಾರ ಶಿವಣಗಿ ಕ್ಯಾನ್ಸರ್ ಆಸ್ಪತ್ರೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಬಡವರು, ಗ್ರಾಮೀಣ ಪ್ರದೇಶದ ಜನರಿಗೆ ದೊರೆಯುತ್ತಿದ್ದ ಆಯುಷ್ಮಾನ್ ಭಾರತ ಯೋಜ ನೆಯ ಸೌಲಭ್ಯವನ್ನು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೂ ವಿಸ್ತರಿಸಲಾಗಿದೆ ಎಂದರು.
ಜಗತ್ತಿನಾದ್ಯಂತ ಸದ್ಯ ಸುಮಾರು 20 ಬಿಲಿಯನ್‌ಗಿಂತ ಹೆಚ್ಚಿನ ಜನರು ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ. ಅಲ್ಲದೇ, ಸುಮಾರು 7 ಬಿಲಿಯನ್ ರೋಗಿಗಳು ಪ್ರತಿ ವರ್ಷ ಸಾವನ್ನಪ್ಪುತ್ತಿದ್ದಾರೆ. ಭಾರತದಲ್ಲಿಯೂ ಸಾವಿರಕ್ಕೆ ನೂರು ಜನ ಈ ರೋಗಕ್ಕೆ ತುತ್ತಾಗುತ್ತಿದ್ದಾರೆ
ಭಾರತದಲ್ಲಿಯೂ ಸಾವಿರಕ್ಕೆ ನೂರು ಜನ ಈ ರೋಗಕ್ಕೆ ತುತ್ತಾಗುತ್ತಿದ್ದಾರೆ. ಹೀಗಾಗಿ, ಕ್ಯಾನ್ಸರ್ ಪೀಡಿತರಿಗೆ ಸೂಕ್ತ ಚಿಕಿತ್ಸೆ ಹಾಗೂ ಕ್ಯಾನ್ಸರ್ ರೋಗದ ತಪಾಸಣೆಯನ್ನು ತೀವ್ರಗೊಳಿಸಬೇಕಾಗಿದೆ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಗ್ರಾಹಕ ಸೇವೆ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ತಪ್ಪು ಜೀವನ ವಿಧಾನ ಹಾಗೂ ಸಮತೋಲನ ಆಹಾರದ ಕೊರತೆಯಿಂದಾಗಿ ಜನಸಾಮಾನ್ಯರು ಪ್ರಸ್ತುತ ದಿನಮಾನದಲ್ಲಿ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ದೇಶದಲ್ಲಿ ಶೇ.12.8ರಷ್ಟು ಜನ ಕ್ಯಾನ್ಸರ್ ರೋಗದಿಂದ ಬಳಲುತ್ತಿದ್ದಾರೆ ಎಂದು ಹೇಳಿದರು.
ಭಾರತ ಸರ್ಕಾರ ದೇಶದ ಜನರ ಆರೋಗ್ಯ ಕಾಪಾಡುವಲ್ಲಿ ವಿಶೇಷ ಆದ್ಯತೆ ನೀಡಿದೆ. ದೇಶಕ್ಕೆ ಕೌಶಲ್ಯಾಧಾರಿತ ಹಾಗೂ ಆರೋಗ್ಯವಂತ ಮಾನವ ಸಂಪನ್ಮೂಲದ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಕೆಎಲ್‌ಇ ಸಂಸ್ಥೆಯ ಈ ಕ್ಯಾನ್ಸರ್ ಆಸ್ಪತ್ರೆಯು ಮುಂದಿನ ದಿನಗಳಲ್ಲಿ ಮಹತ್ವದ ಕೊಡುಗೆ ನೀಡಲಿದೆ ಎಂದು ಅಭಿಪ್ರಾಯಪಟ್ಟರು. ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣಪ್ರಕಾಶ ಪಾಟೀಲ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಂಸದ ಜಗದೀಶ ಶೆಟ್ಟರ, ಆಸ್ಪತ್ರೆಗೆ ದೇಣಿಗೆ ನೀಡಿದ ಡಾ.ಸಂಪತ್ ಕುಮಾರ ದಂಪತಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು