ಶ್ರೀನಗರ್ : 26 ಮಂದಿಯನ್ನು ಭೀಕರವಾಗಿ ಹತ್ಯೆಗೈದ ಮೂವರು ಶಂಕಿತ ಉಗ್ರರ ರೇಖಾ ಚಿತ್ರ ಗಳನ್ನು ಭದ್ರತಾ ಸಂಸ್ಥೆಗಳು ಬಿಡುಗಡೆ ಮಾಡಿವೆ. ದಾಳಿಯಲ್ಲಿ ಬದುಕುಳಿದ ಪ್ರತ್ಯಕ್ಷದರ್ಶಿಗಳು ನೀಡಿದ ವಿವರಣೆಯನ್ನು ಆಧರಿಸಿ ಚಿತ್ರಗಳನ್ನು ಬಿಡಿಸಲಾಗಿದೆ. ಆ ಮೂವರ ಹೆಸರು ಆಸಿಫ್ ಫೌಜಿ (ಮೂಸಾ), ಸುಲೇಮಾನ್ ಶಾ (ಯೂನಸ್) ಮತ್ತು ಅಬು ತಲ್ಲಾ (ಆಸಿಫ್) ಎಂದು ಹೇಳಲಾಗಿದೆ
ಇದೇ ವೇಳೆ ಅತ್ತ 4 ಉಗ್ರರಿರುವ ಫೋಟೋ ಒಂದು ಹರಿದಾಡುತ್ತಿದ್ದು, ಅದರಲ್ಲಿರುವ ಮೂವರ ಚಹರೆಯೊಂದಿಗೆ ರೇಖಾ ಚಿತ್ರಗಳು ಹೋಲಿಕೆಯಾಗುತ್ತಿವೆ. ಅದರಲ್ಲಿ ಜುನೈದ್ ಎಂಬುವನನ್ನು ಈ ಮೊದಲೇ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯ್ಯಲಾಗಿದೆ ಎಂದು ತಿಳಿದುಬಂದಿದೆ. ಈ ಉಗ್ರರು ಕಳೆದೊಂದು ತಿಂಗಳಿಂದ ಆ ಪ್ರದೇಶದಲ್ಲಿ ಸಕ್ರಿಯರಾಗಿದ್ದರು.ಅಂತೆಯೇ, ಫೂಂಟ್‌ನಲ್ಲಿ ನಡೆದ ದಾಳಿಯ ಭಾಗಿಯಾಗಿದ್ದರು ಎಂದು ಮೂಲಗಳು ತಿಳಿಸಿವೆ.
ಮಾಹಿತಿ ಕೊಟ್ಟವರಿಗೆ 20 ಲಕ್ಷ
ಕ್ರೂರದಾಳಿಗೆ ಸಾಕ್ಷಿಯಾದ ಪ್ರತ್ಯಕ್ಷದರ್ಶಿಗಳಿಕೆ ಕೆಲ ಉಗ್ರರ ಫೋಟೋಗಳನ್ನು ತೋರಿಸಿ ಅವರಿಂದ ಪಡೆದ ಮಾಹಿತಿಯ ಆಧಾರದಲ್ಲಿ ಭದ್ರತಾ ಸಂಸ್ಥೆ ಗಳು 3 ಉಗ್ರರ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ, ದಾಳಿಕೋರರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರು, ಬಹುಮಾನ ನೀಡುವುದಾಗಿ ಜಮ್ಮು ಕಾಶ್ಮೀರ ಪೊಲೀಸರು ಘೋಷಿಸಿದ್ದಾರೆ.

