ನವದೆಹಲಿ : ಭೂಕಂಪದಿಂದ ನಲುಗಿದ ನೆರೆಯ ಮ್ಯಾನ್ಮಾರ್ ದೇಶಕ್ಕೆ ‘ಆಪರೇಷನ್ ಬ್ರಹ್ಮ’ ಹೆಸರಿನ ಕಾರ್ಯಾಚರಣೆ ಮೂಲಕ ಭಾರತ ಸಹಾಯಹಸ್ತ ಚಾಚಿದೆ. ಭೂಕಂಪ ಪೀಡಿತ ರಾಷ್ಟ್ರಕ್ಕೆ ಮೊದಲು ನೆರವು ನೀಡಿದ ದೇಶವು ಭಾರತವಾಗಿದೆ.
ಮೊದಲಿಗೆ ಸೇನಾ ವಿಮಾನಗಳ ಮೂಲಕ ಭಾರತ 15 ಟನ್ ಪರಿಹಾರ ಸಾಮಗ್ರಿ ಗಳನ್ನು ಕಳಿಸಿಕೊಟ್ಟಿದೆ. ನೆರವಿನ ಸಾಮಗ್ರಿ ಹೊತ್ತ ಇನ್ನೂ 2 ವಿಮಾನಗಳು ಶೀಘ್ರ ತೆರಳಲಿವೆ.
ರಕಣಾ ಕಾರ್ಯಾಚರಣೆಗಾಗಿ 80 ಎನ್ ಡಿಆರ್‌ಎಫ್ ಸಿಬ್ಬಂದಿ ದೌಡಾಯಿಸಿದ್ದಾರೆ ಹಾಗೂ ಭಾರತದಿಂದ 118 ಫೀಲ್ಡ್ ಆಸ್ಪತ್ರೆ ವೈದ್ಯಕೀಯ ಸಿಬ್ಬಂದಿ ಮತ್ತು 2 ನೌಕಾಪಡ ಹಡಗು ರವಾನೆ ಆಗಲಿವೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.
ಮೊದಲ ಪರಿಹಾರ ಸಾಮಗ್ರಿಗಳಲ್ಲಿ ಟೆಂಟ್ ಗಳು, ಮಲಗುವ ಚೀಲಗಳು, ಹೊದಿಕೆಗಳು, ಸಿದ್ಧ ಆಹಾರ, ನೀರು ಶುದ್ದೀಕರಣ ಸಲಕರಣೆ ಗಳು, ಸೌರದೀಪಗಳು ಸೇರಿದಂತೆ ಅನೇಕ ಅಗತ್ಯ ವಸ್ತುಗಳನ್ನು ವಾಯುಪಡೆ ಯಸಿ130ಜೆ ಮಿಲಿಟರಿ ವಿಮಾನದ ಮೂಲಕ ಮ್ಯಾನ್ಮಾರ್‌ನ ಯಾಂಗೂನ್ ನಗರಕ್ಕೆ ತಲುಪಿಸಲಾಗಿದೆ
ಆಪರೇಷನ್ ಬ್ರಹ್ಮ ಆರಂಭವಾಗಿದೆ. ಭಾರತದಿಂದ ಮೊದಲ ಹಂತದ ಮಾನವೀಯ ನೆರವು ಮ್ಯಾನ್ಮಾರ್‌ನ ಯಾಂಗೋನ್ ವಿಮಾನ ನಿಲ್ದಾಣವನ್ನು ತಲುಪಿದೆ’ ಎಂದು ವಿದೇಶಾಂಗ ಸಚಿವಎಸ್.ಜೈಶಂಕರ್ ಎಕ್ಸ್‌ನಲ್ಲಿ ತಿಳಿಸಿದ್ದಾರೆ

ಭೂಕಂಪಪೀಡಿತ ಮ್ಯಾನ್ಮಾರ್‌ಗೆ ನೆರವಿನ ಹಸ್ತ ಚಾಚಿದ ಮೊದಲ ದೇಶ ಭಾರತ’ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.

