ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಹಣ ವಸೂಲಾತಿ ನಡೆದಿದೆ ಎಂಬ ಆರೋಪದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ಹಿಂದಿನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ ನೀಡಿದೆ.
ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಲಾಗಿದೆ ಎಂದು ಆರೋಪಿಸಿ ಜನಾಧಿಕಾರ ಸಂಘರ್ಷ ಪರಿಷತ್‌ನ ಆದರ್ಶ ಅಯ್ಯರ್ ನೀಡಿದ ದೂರಿನ ಮೇರೆಗೆ ‘ಬೆಂಗಳೂರಿನ ತಿಲಕ್ ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಪ್ರಕರಣ ರದ್ದು ಕೋರಿ ನಳಿನ್ ಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ತಿಲಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿ ಮುಂದಿನ ವಿಚಾರಣೆಯನ್ನು ಅ.22ಕ್ಕೆ ಮುಂದೂಡಿದೆ.
ನಳಿನ್ ಕುಮಾರ್ ಕಟೀಲು ಪರ ಕೆ.ಜಿ.ರಾಘವನ್ ವಾದ ಮಂಡನೆ ಮಾಡಿದ್ದು ಸುಲಿಗೆ ವ್ಯಾಖ್ಯಾನದ ಸನಿಹದಲ್ಲೂ ಈ ಆರೋಪ ಬರುವುದಿಲ್ಲ ಜಾರಿ ನಿರ್ದೇಶನಾಲಯವನ್ನೂ ಆರೋಪಿಯನ್ನಗಿಸಿ ದೂರು ದಾಖಲಿಸಲಾಗಿದೆ ಎಂದು ತಿಳಿಸಿದರು