ಮಹಾರಾಷ್ಟ್ರ : ತೀವ್ರ ಕುತೂಹಲ ಕೆರಳಿಸಿರುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭೆ ಚುನಾವಣೆ ಮತ ಎಣಿಕೆ ಇಂದು ಶನಿವಾರ ನಡೆಯಲಿದ್ದು, ಸಂಜೆ ವೇಳೆಗೆ ಪೂರ್ಣ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. 288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆಗೆ ಬುಧವಾರ ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು. ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳುವ ಗುರಿ ಹೊಂದಿದೆ. ಆದರೆ, ಮಹಾ ವಿಕಾಸ್ ಅಘಾಡಿ (ಎಂವಿಎ) ಮತ್ತೆ ಅಧಿಕಾರಕ್ಕೇರುವ ಯತ್ನದಲ್ಲಿದೆ. ಇದೇ ವೇಳೆ 81 ಸದಸ್ಯ ಬಲದ ಜಾರ್ಖಂಡ್ ವಿಧಾನಸಭೆ ಫಲಿತಾಂಶವೂ ಹೊರಬೀಳಲಿದೆ. ಜಾರ್ಖಂಡ್‌ನಲ್ಲಿ ಜೆಎಂಎಂ-ಕಾಂಗ್ರೆಸ್ ಮೈತ್ರಿಕೂಟವು ಎನ್‌ಡಿಎಗೆ ತೀವ್ರ ಪೈಪೋಟಿ ನೀಡಲಿದೆ ಎಂದು ವಿಶ್ಲೇಷಿಸಲಾಗಿದೆ.