ನವದೆಹಲಿ : ಕೇಂದ್ರ ಸರ್ಕಾರ ಪ್ರತಿವರ್ಷ ನೀಡುವ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಂಗಳವಾರ ದೆಹಲಿಯಲ್ಲಿ ನಡೆಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು 85 ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಬಾರಿಯ ವಿಶೇಷವೆಂದರೆ ದಕ್ಷಿಣ ಚಿತ್ರರಂಗದ ಕಲಾವಿದರೇ ಹೆಚ್ಚಿನ ಪ್ರಶಸ್ತಿಯನ್ನು ಬಾಚಿಕೊಂಡರು.
ಕನ್ನಡಿಗ ರಿಷಬ್ ಶೆಟ್ಟಿ ಕಾಂತಾರ ಚಿತ್ರಕ್ಕಾಗಿ ಅತ್ಯುತ್ತಮ ನಟ, ನಿತ್ಯಾ ಮೆನನ್, ಮಾನಸಿ ಪಾರೇಖ್ ಅತ್ಯುತ್ತಮ ನಟಿ ಪ್ರಶಸ್ತಿ ಸ್ವೀಕರಿಸಿದರು. ಉಳಿದಂತೆ ವಿವಿಧ ವಿಭಾಗಗಳಲ್ಲಿ ಪುರಸ್ಕೃತರಾದವರಿಗೂ ರಾಷ್ಟ್ರಪತಿ ಪ್ರಶಸ್ತಿ ಪ್ರದಾನ ಮಾಡಿದರು. ಇನ್ನು ಇದೇ ವೇಳೆ ನಟ ಮಿಥುನ್ ಚಕ್ರವರ್ತಿ ಅವರಿಗೆ ಸಿನಿಮಾ ರಂಗದಲ್ಲಿ ‘ ಮಾಡಿದ ಜೀವಮಾನದ ಸಾಧನೆಗಾಗಿ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.