ಹರ್ಯಾಣ : ದೇಶಾದ್ಯಂತ ತೀವ್ರ ಕುತೂಹಲ ಮೂಡಿಸಿದ್ದ ಹರ್ಯಾಣ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ 3ನೇ ಬಾರಿಗೆ ಅಧಿಕಾರಕ್ಕೇರುವ ಮೂಲಕ ‘ಜಯದ ಜಿಲೇಬಿ’ ಸವಿದಿದೆ. ಇನ್ನು ಜಮ್ಮು-ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ಈ ಸಲ ಸರ್ವಾಧಿಕ 29 ಸ್ಥಾನಗೆದ್ದಿದೆಯಾದರೂ, ಕಾಶ್ಮೀರ ಭಾಗದಲ್ಲಿ ಉತ್ತಮ ಸ್ಥಾನ ಗಳಿಸಲು ವಿಫಲವಾಗಿದೆ. ಹೀಗಾಗಿ 10 ವರ್ಷದ ನಂತರ ನಡೆದ ಇಲ್ಲಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್-ನ್ಯಾಷನಲ್ ಕಾನ್ಸರೆನ್ಸ್ ಮೈತ್ರಿಕೂಟ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.
90 ಸ್ಥಾನಗಳ ಹರ್ಯಾಣ ಚುನಾವಣೆ ಫಲಿತಾಂಶದ ಆರಂಭಿಕ 1 ತಾಸಿನ ಅವಧಿಯಲ್ಲಿ ಚುನಾವಣಾಪೂರ್ವ ಸಮೀಕ್ಷೆಗಳು ಹೇಳಿದಂತೆ ಕಾಂಗ್ರೆಸ್ ಮುನ್ನಡೆ ಸಾಧಿಸಿತ್ತು. ಸಂಭ್ರಮಾಚ ರಣೆಯನ್ನೂ ಆರಂಭಿಸಿತು. ಕಾರ್ಯಕರ್ತರಿಗೆ ಹಂಚಲು ಜಿಲೇಬಿಯನ್ನು ತಯಾರಿಸಿಟ್ಟುಕೊಂಡಿತ್ತು. ಆದರೆ ಅನಿರೀಕ್ಷಿತ ಎಂಬಂತೆ 10 ಗಂಟೆ ಸುಮಾರಿಗೆ ಟ್ರೆಂಡ್ ಉಲ್ಟಾ ಆಗಿ ಬಿಜೆಪಿ ಮುನ್ನಡೆ ಸಾಧಿಸಿತು. ಮತ್ತೆಂದೂ ಅದು ಹಿನ್ನಡೆ ಸಾಧಿಸದೇ ಸರಳ ಬಹುಮತವಾದ 48 ಸ್ಥಾನ ಗಳಿಸಿ ಹ್ಯಾಟ್ರಿಕ್ ಗೆಲುವಿನ ನಗೆ ಬೀರಿತು ಹಾಗೂ ಹರ್ಯಾಣದಲ್ಲಿ ಪ್ರಖ್ಯಾತವಾದ ‘ಮಾಥುರಾಮ್’ ಹಲ್ವಾಯಿ’ ಬ್ರಾಂಡ್‌ನ ಜಿಲೇಬಿ ಸವಿದು ಬಿಜೆಪಿಗರು ಸಂಭ್ರಮಿಸಿದರು.
ಕಾಂಗ್ರೆಸ್‌ಗೆ ದೇಶಭಕ್ತರಿಂದ ಪ್ರತ್ಯುತ್ತರ
ಹರ್ಯಾಣ ಇತಿಹಾಸದಲ್ಲೇ ಈವರೆಗೆ ಯಾರೂ 3 ಸಲ ಗೆದ್ದಿಲ್ಲ. ಹರ್ಯಾಣ ಜನರು ಹೊಸ ಇತಿಹಾಸ ಬರೆದಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ವಿರೋಧಿ ಪಿತೂರಿಗಳಲ್ಲಿ ಕಾಂಗ್ರೆಸ್ ಭಾಗಿಯಾಗಿ ದೇಶ ವಿಭಜಿಸಲು ಯತ್ನಿಸುತ್ತಿದೆ. ಅಂಥ ಕಾಂಗ್ರೆಸ್‌ಗೆ ‘ದೇಶಭಕ್ತ’ ಹರ್ಯಾಣ ಜನರು ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಶೇಕಡಾವಾರು ಮತಗಳಿಕೆಯನ್ನು ಗಮನಿಸಿದರೆ, ಜಮ್ಮು-ಕಾಶ್ಮೀರ ದಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ