ಪೋರ್‌ಬಂದರ್ : ಗುಜರಾತ್‌ನ ಪೋರ್ ಬಂದರ್ ನಗರದ ಹೊರವಲಯದಲ್ಲಿರುವ ವಿಮಾನ ನಿಲ್ದಾಣದಲ್ಲಿ ಭಾರತೀಯ ಕೋಸ್ಟ್ ಗಾರ್ಡ್ (ಐಸಿಜಿ) ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಮೂವರು ಸಿಬ್ಬಂದಿ ಮೃತಪಟ್ಟಿದ್ದಾರೆ
ಐಸಿಜಿಯ ಅಡ್ವಾನ್ಸ್ ಲೈಟ್ ಹೆಲಿಕಾಪ್ಟರ್ (ಎಎಲ್‌ಎಚ್) ಕೋಸ್ಟ್ ಗಾರ್ಡ್ ವಿಮಾನ ನಿಲ್ದಾಣದ ರನ್ವೇಯಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದಾಗ ಅಪಘಾತಕ್ಕೀಡಾಗಿದೆ ಎಂದು ಪೋರ್‌ಬಂದರ್ ಪೊಲೀಸ್ ವರಿಷ್ಠಾಧಿಕಾರಿ ಭಗೀರಥಸಿನ್ಹ ಜಡೇಜಾ ತಿಳಿಸಿದ್ದಾರೆ