ನವದೆಹಲಿ : ಭಾರತ ನಡೆಸಿದ ‘ಆಪರೇಶನ್ ಸಿಂದೂರ’ದಿಂದ ಕಂಗೆಟ್ಟು ಹತಾಶವಾಗಿ ಪ್ರತಿದಾಳಿ ನಡೆಸುತ್ತಿರುವ ಪಾಕಿಸ್ತಾನ ಶುಕ್ರವಾರ ರಾತ್ರಿ ಕೂಡ ಡ್ರೋನ್ ದಾಳಿ ಮುಂದುವರಿಸಿದೆ. ಇದರ ಪರಿಣಾಮ ಜಮ್ಮು-ಕಾಶ್ಮೀರ, ರಾಜಸ್ಥಾನ, ಗುಜರಾತ್ ಹಾಗೂ ಪಂಜಾಬ್‌ನ ಸುಮಾರು 20ಕ್ಕೂ ಹೆಚ್ಚು ಸ್ಥಳಗಳು ದಾಳಿಗೀಡಾಗಿವೆ. ಈ ಭಾಗಗಳಲ್ಲಿ ಕತ್ತಲು ಆವರಿಸಿದ್ದು ಸೈರನ್ ಸ್ಫೋಟದ ಶಬ್ದಗಳು ಮಾರ್ದನಿಸಿವೆ.
ಆದರೆ, ಬರಾಕ್ -8, ಎಸ್-400 ಹಾಗೂ ಆಕಾಶ್ ವಾಯುರಕ್ಷಣಾ ವ್ಯವಸ್ಥೆ ಬಳಸಿ ಶತ್ರು ದೇಶದಿಂದ ಬಂದ ನೂರಾರು ಡ್ರೋನ್ಗಳನ್ನು ಪುಡಿಗಟ್ಟಲಾಗಿದೆ ಆದರೆ ಪಂಜಾಬ್‌ನ ಫಿರೋಜ್‌ಪುರದಲ್ಲಿ ಮನೆಯೊಂದರ ಮೇಲೆ ಡ್ರೋನ್ ಬಿದ್ದಿದ್ದು, ಮನೆ ಹಾಗೂ ಕಾರುಗಳು ಬೆಂಕಿಗೆ ಆಹುತಿಯಾಗಿವೆ ಹಾಗೂ ಮೂವರು ಗಾಯಗೊಂಡಿದ್ದಾರೆ. ಹಾಲಿ ಭಾರತ-ಪಾಕ್ ಸಮರ ಆರಂಭಗೊಂಡ ಬಳಿಕ ಪಾಕ್ ನಡೆಸಿದ ಡ್ರೋನ್ ದಾಳಿಯಲ್ಲಿ ಗಾಯದ ಘಟನೆ ಸಂಭವಿಸುತ್ತಿರುವುದು ಇದೇ ಮೊದಲು. ಮನೆಗೆ ಹಾಗೂ ಕಾರಿಗೆ ಬೆಂಕಿ ಹೊತ್ತಿ ಧಗಧಗಿಸುವ ದೃಶ್ಯಗಳ ವಿಡಿಯೋಗಳು ವೈರಲ್ ಆಗಿವೆ.
ಹಲವೆಡೆ ಸ್ಪೋಟ :
ಜಮ್ಮು-ಕಾಶ್ಮೀರದ ಜಮ್ಮು, ನಗೋಟಾ, ರಚೌರಿ, ಸಾಂಬಾ. ಪೂಂಛ, ರಾಜಸ್ಥಾನದ ಪೋಋಣ್, ಶ್ರೀಗಂಗಾನಗರ, ಬಾಡೇರ್, ಉತ್ತರಲೈ, ಫಲೋಡಿ, ಜೈಸಲ್ವೇರ್, ಪಂಜಾಬ್‌ನ ಪಠಾಣ್‌ಕೋಟ್, ಅಮೃತಸರ. ಪೂರ್ತಲಾ, ಜಲಂಧರ್, ಲುಧಿಯಾನಾ, ಆದಂಪುರ, ಚಂಡೀಗಢ, ನಾಲ್ ಹಾಗೂ ಫಿರೋಜ್ಪುರ ಮತ್ತು ಗುಜರಾತ್‌ನ ಭುಜ್ ಮೇಲೆ ರಾತ್ರಿ 8ರ ಸುಮಾರಿಗೆ ಡ್ರೋನ್ ದಾಳಿಗೆ ಯತ್ನ ನಡೆದಿದೆ.

