161
ಶ್ರೀನಗರ : ಭಯೋತ್ಪಾದನೆಗೆ ನಲುಗಿರುವ ಕಾಶ್ಮೀರದಲ್ಲಿ ಬದಲಾವಣೆಯ ಸಂಕೇತ ಎಂಬಂತೆ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಮ್ಯಾರಥಾನ್ ಓಟ ಭಾನುವಾರ ನಡೆದಿದೆ. 2000 ಜನ ಭಾಗಿಯಾಗಿದ್ದ ಈ ಮ್ಯಾರಥಾನ್‌ನಲ್ಲಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಕೂಡ ಪಾಲ್ಗೊಂಡು 2 ತಾಸಿನಲ್ಲಿ 21 ಕಿ.ಮೀ ಓಡಿ ಗಮನ ಸೆಳೆದಿದ್ದಾರೆ.
ಶ್ರೀನಗರದ ಪೋಲೋ ಸ್ಟೇಡಿಯಂನಲ್ಲಿ ಕಾಶ್ಮೀರದ ಮೊದಲ ಅಂತಾರಾಷ್ಟ್ರೀಯ ಮ್ಯಾರಥಾನ್ ನಡೆಯಿತು. 59 ವಿದೇಶಿ ಅಥೀಟ್ ಗಳು ಸೇರಿ ಸುಮಾರು 2000 ಜನರು ಭಾಗಿಯಾಗಿದ್ದರು. ಸಿಎಂ ಒಮರ್ ಅಬ್ದುಲ್ಲಾ ಅಲ್ಲದೆ, ಬಾಲಿವುಡ್ ನಟ ಸುನೀಲ್ ಶೆಟ್ಟಿ ಕೂಡ ಭಾಗಿಯಾಗಿದ್ದರು.

