ಹೊಸದಿಲ್ಲಿ: ಹತ್ತನೇ ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆ ಶುಕ್ರವಾರ ಭಾರತ ಸೇರಿ ಜಗತ್ತಿನಾದ್ಯಂತ ಲಕ್ಷಾಂತರ ಮಂದಿ ಯೋಗಾಭ್ಯಾಸ ಮಾಡುವ ಮೂಲಕ ಯೋಗದ ಮಹತ್ವ ಸಾರಿದರು. ದಿಲ್ಲಿಯಲ್ಲಿ ರಾಷ್ಟ್ರಪತಿ ಬ್ರೌಪದಿ ಮುರ್ಮು ಅವರು ಅಧಿಕಾರಿಗಳೊಂದಿಗೆ ಯೋಗ ಪ್ರದರ್ಶನ ನೀಡಿದರೆ, ಶ್ರೀನಗರದಲ್ಲಿ ನಡೆದ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿ ದೇಶದ ವಿವಿಧ ಭಾಗಗಳಲ್ಲಿ ನಡೆಯುವ ಯೋಗ ದಿನಕ್ಕೆ ಚಾಲನೆ ನೀಡಿದರು.
ದೇಶದ ಉದ್ದಗಲ ಆಯೋಜಿಸಲಾಗಿದ್ದ ಯೋಗ ಕಾರ್ಯಕ್ರಮಗಳಲ್ಲಿ ವಯಸ್ಸಿನ ಮಿತಿಯಿಲ್ಲದೆ ಭಾಗಿಯಾಗಿದ್ದ ಸಾವಿರಾರು ಮಂದಿ ವಿವಿಧ ಆಸನಗಳನ್ನು ಪ್ರದರ್ಶಿಸಿದರು. ಭಾರತೀಯ ರಕ್ಷಣಾ ಪಡೆಗಳು ಸಹ ಯೋಗ ದಿನ ವೈಶಿಷ್ಟ್ಯವನ್ನು ಹರಡಿದವು. ದೇಶದ ಹಲವೆಡೆ. ಮಳೆ ಸುರಿಯುತ್ತಿದ್ದರೂ ಅದನ್ನು ಲೆಕ್ಕಿಸದೆ ಸಾರ್ವಜನಿಕರು, ವಿದ್ಯಾರ್ಥಿಗಳು ಯೋಗಾಭ್ಯಾಸದ ಮಹತ್ವಕ್ಕೆ ಮೆರುಗು ತಂದರು.