Home » ಇರಾನ್‌ ಅಣುಸ್ಥಾವರಕ್ಕೆ ಇಸ್ರೇಲ್‌ನಿಂದ ಮತ್ತೊಮ್ಮೆ ಬಾಂಬ್
 

ಇರಾನ್‌ ಅಣುಸ್ಥಾವರಕ್ಕೆ ಇಸ್ರೇಲ್‌ನಿಂದ ಮತ್ತೊಮ್ಮೆ ಬಾಂಬ್

by Kundapur Xpress
Spread the love

ಟೆಹ್ರಾನ್‌ : ಮಧ್ಯಪ್ರಾಚ್ಯದಲ್ಲಿ ತಲ್ಲಣ ಸೃಷ್ಟಿಸಿರುವ ಇಸ್ರೇಲ್-ಇರಾನ್ ಸಂಘರ್ಷ 9ನೇ ದಿನಕ್ಕೆ ಪ್ರವೇಶಿಸಿದೆ. ಇರಾನ್ ನಡೆಸಿದ ಕ್ಲಸ್ಟರ್ ದಾಳಿಯಿಂದ ಕೊಂಚ ಹಾನಿಯ ಅನುಭವಿಸಿದ್ದ ಇಸ್ರೇಲ್ ಮತ್ತೆ ಸಿಡಿದೆದ್ದಿದ್ದು, ಇರಾನ್‌ ಪ್ರಮುಖ ಅಣ್ವಸ್ತ್ರ ಘಟಕವಾದ ಇಸಹಾನ್ ಅಣ್ವಸ್ತ್ರ ಘಟಕದ ಮೇಲೆ 2ನೇ ಬಾರಿ ದಾಳಿ ಮಾಡಿದೆ.

ಇದೇ ವೇಳೆ, ಇಸ್ರೇಲ್‌ನ 1200 ಜನರ ನರಮೇಧಕ್ಕೆ ಕಾರಣವಾದ 5.78 ಹಮಾಸ್ ದಾಳಿಗೆ ಸಹಕರಿಸಿದ್ದ ಕಮಾಂಡರ್ ಸೇರಿದಂತೆ ಇರಾನಿ ರೆವಲ್ಯೂಷನರಿ ಗಾರ್ಡ್ಸ್‌ನ ಇಬ್ಬರು ಕಮಾಂಡರ್‌ಗಳನ್ನು ಹತ್ಯೆ ಮಾಡಿರುವುದಾಗಿ ಹೇಳಿಕೊಂಡಿದೆ

ಇಸ್ರೇಲ್ ಸೇನೆಯು ಇರಾನ್‌ನ ಇಸಹಾನ್ ಅಣ್ವಸ್ತ್ರ ಕೇಂದ್ರದ ಮೇಲೆ 2ನೇ ಬಾರಿ 50 ಯುದ್ಧವಿಮಾನಗಳ ಮೂಲಕ ದಾಳಿ ನಡೆಸಿದೆ.

 

Related Articles

error: Content is protected !!