195
ನವದೆಹಲಿ : ಅಬಕಾರಿ ಹಗರಣದಲ್ಲಿ 50 ದಿನಗಳ ಹಿಂದೆ ಜೈಲು ಸೇರಿದ್ದ ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಅದ್ದಿ ಪಾರ್ಟಿ (ಆಪ್) ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರಿಗೆ ನಿರೀಕ್ಷೆಯಂತೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ನೀಡಿದೆ. ಅದರನ್ವಯ ಅವರು ಶುಕ್ರವಾರ ಸಂಜೆ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಯಾಗಿದ್ದು, ‘ಸರ್ವಾಧಿಕಾರದಿಂದ ದೇಶವನ್ನು ರಕ್ಷಿಸಬೇಕಿದೆ’ ಎಂದು ಬಿಜೆಪಿ ವಿರುದ್ಧ ಗುಡುಗಿದ್ದಾರೆ.

