Home » ರಾಷ್ಟ್ರಪತಿಗೆ ಕಾಲಮಿತಿ : ಉಪರಾಷ್ಟ್ರಪತಿ ಕಟು ಟೀಕೆ
 

ರಾಷ್ಟ್ರಪತಿಗೆ ಕಾಲಮಿತಿ : ಉಪರಾಷ್ಟ್ರಪತಿ ಕಟು ಟೀಕೆ

by Kundapur Xpress
Spread the love

ನವದೆಹಲಿ : ವಿಧೇಯಕಗಳ ಕುರಿತು ನಿರ್ಧರಿಸಲು ರಾಷ್ಟ್ರಪತಿ ಗಳಿಗೆ ಕಾಲಮಿತಿ ನಿಗದಿಪಡಿಸಿದ ಸುಪ್ರೀಂ ಕೋರ್ಟ್ ಆದೇಶಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ‘ನ್ಯಾಯಾಧೀಶರು ಸೂಪರ್ ಪಾರ್ಲಿಮೆಂಟ್ ನಂತೆ ಕೆಲಸ ಮಾಡುವುದು ಸರಿಯಲ್ಲ. ರಾಷ್ಟ್ರಪತಿಗಳದ್ದು ಉನ್ನತ ಹುದ್ದೆ. ಅವರಿಗೆ ಕಾಲಮಿತಿ ನಿಗದಿ ಸರಿಯಲ್ಲ. ಪ್ರಜಾಸತ್ತಾತ್ಮಕ ಶಕ್ತಿಗಳ ಮೇಲೆ ಸುಪ್ರೀಂ ಕೋರ್ಟ್ ಅಣ್ವಸ್ತ್ರ ಕ್ಷಿಪಣಿ ಪ್ರಯೋಗಿಸುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಸುಟ್ಟ ಹಣದ ಕಂತೆಗಳು ಪತ್ತೆಯಾದರೂ ಎಫ್‌ಐಆರ್ ದಾಖಲು ಮಾಡದಿರುವುದನ್ನು ಅವರು ಪ್ರಶ್ನೆ ಮಾಡಿದ್ದಾರೆ.

ತಮಿಳುನಾಡು ರಾಜ್ಯಪಾಲ ಮತ್ತು ತಮಿಳುನಾಡು ಸರ್ಕಾರ ನಡುವಿನ ಸಂಘರ್ಷದ ಪ್ರಕರಣದಲ್ಲಿ ಯಾವುದೇ ವಿಧೇಯಕಗಳ ಕುರಿತು ನಿರ್ಧಾರ ತೆಗೆದುಕೊಳ್ಳಲು ರಾಜ್ಯಪಾಲರು ಮತ್ತು ರಾಷ್ಟ್ರಪತಿಗಳಿಗೆ 3 ತಿಂಗಳ ಕಾಲಮಿತಿಯನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿತ್ತು

 

Related Articles

error: Content is protected !!