84
ಹೊಸದಿಲ್ಲಿ : ಜಾಗ್ವಾರ್ ಯುದ್ಧ ವಿಮಾನ ಪತನಗೊಂಡು ಭಾರತೀಯ ವಾಯುಪಡೆಯ ಇಬ್ಬರು ಪೈಲಟ್‌ಗಳು ಮೃತಪಟ್ಟಿದ್ದಾರೆ. ಈ ಘಟನೆ ರಾಜಸ್ಥಾನದ ಚುರು ಜಿಲ್ಲೆಯ ಭಾನೋಡಾ ಗ್ರಾಮದಲ್ಲಿ ಸಂಭವಿಸಿದೆ.
ಘಟನಾ ಸ್ಥಳದಿಂದ ಪೈಲಟ್‌ಗಳ ಮೃತದೇಹವನ್ನು ವಶಪಡಿಸಿಕೊಳ್ಳಲಾಗಿದೆ. ಅಪಘಾತಕ್ಕೆ ನಿರ್ದಿಷ್ಟ ಕಾರಣ ತಿಳಿಯಲು ತನಿಖೆಗೆ ಆದೇಶಿಸಲಾಗಿದೆ. ಇದು ಕಳೆದ ಐದು ತಿಂಗಳಲ್ಲಿ ಪತನವಾದ ಮೂರನೇ ಜಾಗ್ವಾರ್ ಯುದ್ಧ ವಿಮಾನವಾಗಿದೆ.

