ನವದೆಹಲಿ : ಜ.20ರಂದು ನಡೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಕಾರ್ಯಕ್ರಮ ದಲ್ಲಿ ಭಾರತದ ಪ್ರತಿನಿಧಿಯಾಗಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಭಾಗಿಯಾಗಲಿದ್ದಾರೆ. ಈ ವೇಳೆ ಜೈಶಂಕರ್ ಟ್ರಂಪ್ ಸರ್ಕಾರದ ಪ್ರತಿನಿಧಿಗಳೊಂದಿಗೂ ಮಾತುಕತೆ ನಡೆಸಲಿದ್ದಾರೆ ಎಂದು ಸಚಿವಾಲಯ ಮಾಹಿತಿ ನೀಡಿದೆ.