ಶ್ರೀನಗರ : ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿಯ ಗೋಡೆ ಕುಸಿದಿದ್ದು, ಸಂವಿಧಾನದ ಫಲಗಳು ಖಾತ್ರಿಯಾಗುತ್ತಿವೆ ಎಂದ ಪ್ರಧಾನಿ ನರೇಂದ್ರ ಮೋದಿಯವರು, ವಿಧಾನಸಭೆ ಚುನಾವಣೆಗೆ ಸಿದ್ಧತೆಗಳು ಆರಂಭವಾಗಿದ್ದು ಕೇಂದ್ರಾಡಳಿತ ಪ್ರದೇಶ ಶೀಘ್ರದಲ್ಲೇ ತನ್ನ ರಾಜ್ಯ ಸ್ಥಾನಮಾನ ಮರಳಿ ಪಡೆಯಲಿದೆ ಎಂದು ಭರವಸೆ ನೀಡಿದರು
ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮೊದಲ ಬಾರಿಗೆ ಗುರುವಾರ ಜಮ್ಮು-ಕಾಶ್ಮೀರಕ್ಕೆ ಎರಡು ದಿನಗಳ ಭೇಟಿ ನೀಡಿದ ಮೋದಿ, ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಶನಲ್ ಕನ್ವೆನ್ಸನ್ ಕಾಂಪ್ಲೆಕ್ಸ್ನಲ್ಲಿ(ಎಸ್ಕೆಐಸಿಸಿ) ನಡೆದ ಕಾರ್ಯಕ್ರಮ ಉದ್ದೇಶಿ ಜಮ್ಮು-ಕಾಶ್ಮೀರಕ್ಕೆ ವಿಧಾನಸಭಾ ಚುನಾವಣೆಗೆ ಸಿದ್ಧತೆಗಳು ಪ್ರಾರಂಭವಾಗಿವೆ. ನಿಮ್ಮ ಮತದಿಂದ ನೀವು ಸರ್ಕಾರವನ್ನು ಆಯ್ಕೆ ಮಾಡುವ ಸಮಯ ದೂರವಿಲ್ಲ ಎಂದು ಹೇಳಿದರು