ನವದೆಹಲಿ : 76ನೇ ಗಣರಾಜ್ಯೋತ್ಸವ ದಿನದ ಅಂಗವಾಗಿ ರಾಜಧಾನಿ ನವದೆಹಲಿಯಲ್ಲಿ ನಡೆದ ಪಥಸಂಚಲನದಲ್ಲಿ ಲಕ್ಕುಂಡಿ ದೇಗುಲದ ವೈಭವ ಪ್ರದರ್ಶಿಸುವ ಸ್ತಬ್ಧಚಿತ್ರ ಕರ್ನಾಟಕವನ್ನು ಪ್ರತಿನಿಧಿಸಿತು. ಕರ್ತವ್ಯ ಪಥದಲ್ಲಿ ಸ್ತಬ್ಧಚಿತ್ರ ಮೆರವಣಿಗೆ ಬರುತ್ತಿದ್ದಂತೆ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯಾಜ್ಯ ಸಚಿವ ಪ್ರಹ್ಲಾದ್ ಜೋಶಿ ಅವರು ಎದ್ದುನಿಂತು ಚಪ್ಪಾಳೆ ತಟ್ಟಿ ಕಲಾವಿದರನ್ನು ಅಭಿನಂದಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.