Home » ಕುಂಭದಲ್ಲಿ 60 ಕೋಟಿ ಭಕ್ತರಿಂದ ಪುಣ್ಯಸ್ನಾನ
 

ಕುಂಭದಲ್ಲಿ 60 ಕೋಟಿ ಭಕ್ತರಿಂದ ಪುಣ್ಯಸ್ನಾನ

ಫೆ.26ರಂದು ಕೊನೆಯ ದಿನ

by Kundapur Xpress
Spread the love

ಮಹಾಕುಂಭ ನಗರ : ಪ್ರಯಾಗರಾಜ್ ನಲ್ಲಿ ಜ.13ರಿಂದ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಇದುವರೆಗೆ 60 ಕೋಟಿ ಭಕ್ತರು ಭಾಗವಹಿಸಿ ಪವಿತ್ರ ಸ್ನಾನ ಮಾಡಿದ್ದಾರೆ ಎಂದು ಉತ್ತರ ಪ್ರದೇಶ ಸರ್ಕಾರ ಶನಿವಾರ ತಿಳಿಸಿದೆ.

ಭಾರತದ ಜನಸಂಖ್ಯೆ ಸರಿ ಸುಮಾರು 143 ಕೋಟಿ ಇದೆ. ಇದರಲ್ಲಿ 110 ಕೋಟಿ ಜನ ಸನಾತನ ಧರ್ಮೀಯರಾಗಿದ್ದಾರೆ. ಪ್ರಸ್ತುತ ಇವರಲ್ಲಿ ಅರ್ಧಕ್ಕಿಂತಲೂ ಬಹುಪಾಲು ಜನ ಕುಂಭದಲ್ಲಿ ಭಾಗವಹಿಸಿ ಪುಣ್ಯಸ್ನಾನ ಮಾಡಿದ್ದಾರೆ. ಫೆ.26ರ `ಮಹಾಶಿವರಾತ್ರಿಯಂದು ಕೊನೆಯ ಅಮೃತ ಸ್ನಾನ ನಡೆಯಲಿದ್ದು, ಈ ಸಂಖ್ಯೆ 65 ಕೋಟಿಯನ್ನೂ ಮೀರುವ ಸಾಧ್ಯತೆಯಿದೆ’ ಎಂದು ಸರ್ಕಾರ ತಿಳಿಸಿದೆ.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾರವರು ಕುಂಭಮೇಳದಲ್ಲಿ ಪಾಲ್ಗೊಂಡು ಪುಣ್ಯಸ್ನಾನಗೈದರು

 

Related Articles

error: Content is protected !!